ಕೂಗು ನಿಮ್ಮದು ಧ್ವನಿ ನಮ್ಮದು

ಸಚಿವ ಕೆ.ಎಸ್.ಈಶ್ವರಪ್ಪ ವಜಾಗೆ ಕಾಂಗ್ರೆಸ್ ಕಾರ್ಯಕರ್ತರ ಆಗ್ರಹ

ಕೊಡಗು: ಕೇಸರಿ ಧ್ವಜವನ್ನು ರಾಷ್ಟ್ರಧ್ವಜವನ್ನಾಗಿ ಮಾಡುತ್ತೇವೆ ಎನ್ನುವ ಮೂಲಕ ಸಚಿವ ಕೆ.ಎಸ್.ಈಶ್ವರಪ್ಪ ದೇಶದ್ರೋಹದ ಕೆಲಸ ಮಾಡಿದ್ದು, ಅವರನ್ನು ಸಚಿವ ಸಂಪುಟದಿಂದ ವಜಾ ಮಾಡುವಂತೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಮಡಿಕೇರಿಯಲ್ಲಿ ಇದು ಪ್ರತಿಭಟನೆ ನಡೆಸಿದ್ರು. ಜಿಲ್ಲಾಧಿಕಾರಿ ಕಛೇರಿ ಮುಂದೆ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು BJP ಮತ್ತು ಸಚಿವ ಈಶ್ವರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ರು.

BJP ತೊಲಗಲಿ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಿ ಬಂಧಿಸಲಿ ಎಂದು ಆಗ್ರಹಿಸಿದ್ದು, ನಂತರ ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ರು. ಈ ಸಮಯದಲ್ಲಿ ಮಾತನಾಡಿದ ಕಾಂಗ್ರೆಸ್ ಕೊಡಗು ಜಿಲ್ಲಾಧ್ಯಕ್ಷ ಧರ್ಮಜಾ ಉತ್ತಪ್ಪ ಈಶ್ವರಪ್ಪ ಮಾಜಿ ಉಪಮುಖ್ಯಮಂತ್ರಿ ಆಗಿದ್ದವರು. ಈಗ ಒಬ್ಬ ಸಚಿವರಾಗಿ ದೇಶ ದ್ರೋಹದ ಹೇಳಿಕೆ ನೀಡಿದ್ದಾರೆ. ಇಂತಹವರನ್ನು ಸಚಿವ ಸ್ಥಾನದಿಂದ ವಜಾ ಮಾಡಿ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

error: Content is protected !!