ಕೂಗು ನಿಮ್ಮದು ಧ್ವನಿ ನಮ್ಮದು

ಸೋಮವಾರದಿಂದಲೇ 6-12 ವರ್ಷದ ಮಕ್ಕಳಿಗೆ ಲಸಿಕೆಗೆ ಸಿದ್ಧತೆ: ಕೆ.ಸುಧಾಕರ್

ಬೆಂಗಳೂರು: ಆರು, ಹನ್ನೆರಡು ವರ್ಷದ ಮಕ್ಕಳಿಗೆ ಸೋಮವಾರದಿಂದಲೇ ಲಸಿಕೆ ನೀಡಲು ನಾವು ತಯಾರಿ ಮಾಡಿಕೊಳ್ಳುತ್ತೇವೆ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ಹೇಳಿದರು. ಮಾದ್ಯಮದವರೊಂದಿಗೆ ಮಾತನಾಡಿದ ಸುಧಾಕರ್ ಅವರು, ಇಡೀ ರಾಜ್ಯದಲ್ಲಿ ದೊಡ್ಡ ಮಟ್ಟದ ಡ್ರೈ ಆರಂಭ ಮಾಡುತ್ತೇವೆ. ಆರು, ಹನ್ನೆರಡು ವರ್ಷದ ಮಕ್ಕಳಿಗೆ ಶೀಘ್ರದಲ್ಲಿ ಲಸಿಕೆ ನೀಡುವ ವಿಚಾರವಾಗಿ  ಮುಖ್ಯಮಂತ್ರಿ ಕೂಡಾ ಈಗಾಗಲೇ ಈ ಬಗ್ಗೆ ನನ್ನ ಜೊತೆ ಚರ್ಚೆ ಮಾಡಿದ್ದಾರೆ ಎಂದು ಹೇಳಿದ್ರು.

ಈ ಬಗ್ಗೆ ಶಿಕ್ಷಣ ಇಲಾಖೆ ಸಚಿವರು, ಅಧಿಕಾರಿಗಳ ಜೊತೆ ಮಾತನಾಡುತ್ತೇನೆ. ಬೇಸಿಗೆ ರಜೆ ಪ್ರಾರಂಭ ಆಗಿದೆ. ಹಾಗಾಗಿ ಶಾಲೆಯಲ್ಲಿ ಮಾಡಬೇಕಾ? ಆಯಾ ಇನ್‍ಸ್ಟಿಟ್ಯೂಷನ್‍ನಲ್ಲಿ ಮಾಡಬೇಕಾ ಎಂದು ಚರ್ಚೆ ಮಾಡುತ್ತೇವೆ. ಮುಖ್ಯಮಂತ್ರಿ ಕೂಡಾ ಈಗಾಗಲೇ ಈ ಬಗ್ಗೆ ನನ್ನ ಜೊತೆ ಚರ್ಚೆ ಮಾಡಿದ್ದಾರೆ. ಸೋಮವಾರದಿಂದಲೇ ಲಸಿಕೆ ನೀಡಲು ನಾವು ತಯಾರಿ ಮಾಡಿಕೊಳ್ಳುತ್ತಿದ್ದೇವೆ. ಆರು, ಹನ್ನೆರಡು ವರ್ಷದ ಮಕ್ಕಳಿಗೆ ಕೇಂದ್ರ ಸರ್ಕಾರದ ಮಾರ್ಗಸೂಚಿ ನೋಡಿಕೊಂಡು ಲಸಿಕೆ ಉಚಿತನಾ ಅಂತ ನಿರ್ಧಾರ ಮಾಡುತ್ತೇವೆ ಎಂದರು.

ಬೆಂಗಳೂರಿನಲ್ಲಿ ಕೇಸ್ ದಿನೇ ದಿನೇ ಹೆಚ್ಚಳ ಆಗುತ್ತಿರೋ ವಿಚಾರವಾಗಿ ಪ್ರತಿಕ್ರಿಯಿಸಿದ ಸುಧಾಕರ್ ಅವರು, ಸದ್ಯಕ್ಕೆ ಯಾರು ಆತಂಕ ಪಡುವ ಅವಶ್ಯಕತೆ ಇಲ್ಲ. ದೊಡ್ಡ ಮಟ್ಟದ ಕೇಸ್ ಹೆಚ್ಚಳ ಆಗಿಲ್ಲ. ಜನರು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುಬೇಕು ಎಂದು ತಿಳಿಸಿದ್ರು. ಲಸಿಕೆ ಹಾಗೂ ಮಾಸ್ಕ್ ಕಡ್ಡಾಯವಾಗಿ ಹಾಕಬೇಕು. ಸದ್ಯಕ್ಕೆ ಆತಂಕ ಪಡುವ ಸ್ಥಿತಿ ರಾಜ್ಯದಲ್ಲಿ ಇಲ್ಲ.

ಅನಗತ್ಯವಾಗಿ ಭಯ, ಆತಂಕಕ್ಕೆ ಒಳಗಾಗುವ ಅವಶ್ಯಕತೆ ತಕ್ಷಣಕ್ಕೆ ಇಲ್ಲ. ಬೂಸ್ಟರ್ ಡೋಸ್‍ನ್ನು ತೆಗೆದುಕೊಳ್ಳುತ್ತಿದ್ದಾರೆ. ಎರಡು, ಮೂರು ದಿನಗಳಿಂದ ಬೂಸ್ಟರ್ ಡೋಸ್ ಪಡೆಯುವವರ ಸಂಖ್ಯೆ ಹೆಚ್ಚಾಗಿದೆ. ಜನರು ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ರು.
ಒಮಿಕ್ರಾನ್ ಹೊಸ ತಳಿ ಪತ್ತೆ ವಿಚಾರವಾಗಿ ಮಾತನಾಡಿ, ಈಗಾಗಲೇ ಲ್ಯಾಬ್‍ಗೆ ಸ್ಯಾಂಪಲ್ ಕಳುಹಿಸಲಾಗಿದೆ. ಇವತ್ತು ವರದಿ ಬರಬಹುದು ಎಂದರು.

error: Content is protected !!