ಮೂರು ದಿನಗಳ ವಿಧಾನಸಭೆ ಕಲಾಪದ ಮೊದಲ ದಿನವಾದ ಇಂದು 182 ಶಾಸಕರು ಪ್ರಮಾಣವಚನ ಸ್ವೀಕಾರ ಮಾಡಿದರು. 16ನೇ ವಿಧಾನಸಭೆಯ ಮೊದಲ ಅಧಿವೇಶನದ ಮೊದಲ ದಿನವಾದ ಸೋಮವಾರ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಕ್ಯಾಬಿನೆಟ್ ಸಚಿವರು ಸೇರಿದಂತೆ ಒಟ್ಟು 182 ಮಂದಿ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಇನ್ನೂ 42 ಮಂದಿ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಲು ಬಾಕಿ ಉಳಿದಿದ್ದಾರೆ.