ದೇಶದಲ್ಲಿಯೇ ಅತಿ ಹೆಚ್ಚು ನೇರ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ ಕರ್ನಾಟಕ 3ನೇ ಸ್ಥಾನದಲ್ಲಿದೆ. ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದರೆ, ರಾಜಧಾನಿ ದಿಲ್ಲಿ ಎರಡನೇ ಸ್ಥಾನದಲ್ಲಿವೆ. ಅಲ್ಲದೇ, ಹೆಚ್ಚು ನೇರ ತೆರಿಗೆ ಸಂಗ್ರಹಿಸಿದ ದೇಶದ ನಗರಗಳ ಪೈಕಿಯೂ ರಾಜ್ಯ ರಾಜಧಾನಿ ಬೆಂಗಳೂರು ಮೂರನೇ ಸ್ಥಾನದಲ್ಲಿದೆ.
ಆದಾಯ ತೆರಿಗೆ ಹಾಗೂ ಕಾರ್ಪೊರೇಟ್ ತೆರಿಗೆಯನ್ನು ಒಳಗೊಂಡಿರುವ ನೇರ ತೆರಿಗೆಯು ದೇಶದಲ್ಲಿ ಕಳೆದ ವರ್ಷ ಗಣನೀಯವಾಗಿ ಏರಿಕೆಯಾಗಿದೆ.