ಕೂಗು ನಿಮ್ಮದು ಧ್ವನಿ ನಮ್ಮದು

ಇವತ್ತು ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ

ನವದೆಹಲಿ: ಕೇಂದ್ರ ಚುನಾವಣಾ ಆಯೋಗ ಇಂದು ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದು, ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಿದೆ. ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಇಂದು ಬೆಳಗ್ಗೆ 11.30ಕ್ಕೆ ನವದೆಹಲಿಯ ವಿಜ್ಞಾನ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದು, ಕರ್ನಾಟಕದ 224 ವಿಧಾನಸಭಾ ಕ್ಷೇತ್ರಗಳಿಗೆ ಮತದಾನದ ದಿನಾಂಕ, ಫಲಿತಾಂಶದ ಡೇಟ್ ಜೊತೆಗೆ ನೀತಿ ಸಂಹಿತೆ ಬಗ್ಗೆ ವಿವರಣೆ ನೀಡಲಿದ್ದಾರೆ.
2018 ರ ವಿಧಾನಸಭಾ ಚುನಾವಣೆಯು ಮೇ 12, 2018 ರಂದು ನಡೆದಿತ್ತು. ಮತ್ತು ಪ್ರಸ್ತುತ ವಿಧಾನಸಭೆಯ ಅವಧಿಯು ಮೇ 24, 2023 ರಂದು ಮುಕ್ತಾಯಗೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ ಇಂದು ಚುನಾವಣಾ ಆಯೋಗವು ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಘೋಷಣೆ ಮಾಡಲಿದೆ. ವೇಳಾಪಟ್ಟಿ ಪ್ರಕಟವಾದ ನಂತರ ಮಾದರಿ ನೀತಿ ಸಂಹಿತೆ ಜಾರಿಗೆ ಬರಲಿದೆ.

ಚುನಾವಣಾ ಸಿದ್ಧತೆಗಳನ್ನು ಪೂರ್ಣಗೊಳಿಸುವಂತೆ ರಾಜ್ಯ ಚುನಾವಣಾ ಆಯೋಗವು ಇತ್ತೀಚೆಗೆ ಎಲ್ಲಾ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಪತ್ರ ಬರೆದಿತ್ತು. ಚುನಾವಣಾ ಕಾರ್ಯದಲ್ಲಿ ತೊಡಗಿರುವ ಎಲ್ಲ ಅಧಿಕಾರಿಗಳ ವರ್ಗಾವಣೆಯನ್ನು ನಿಲ್ಲಿಸುವಂತೆಯೂ ಇಸಿಐ ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು.

ಈ ತಿಂಗಳ ಆರಂಭದಲ್ಲಿ ಮುಖ್ಯ ಚುನಾವಣಾ ಆಯುಕ್ತರು ಕರ್ನಾಟಕಕ್ಕೆ ಭೇಟಿ ನೀಡಿ ರಾಜ್ಯದಲ್ಲಿ ಚುನಾವಣಾ ಸಿದ್ಧತೆಗಳನ್ನು ಪರಿಶೀಲಿಸಿದ್ದರು.

ಕರ್ನಾಟಕ ಸರ್ಕಾರವು ಕಳೆದ ವಾರ ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಸೇರಿದಂತೆ ಹಲವು ನಿರ್ಣಾಯಕ ಘೋಷಣೆಗಳನ್ನು ಮಾಡಿತ್ತು.

error: Content is protected !!