ಕೂಗು ನಿಮ್ಮದು ಧ್ವನಿ ನಮ್ಮದು

ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ದಿನಾಂಕ ಫೀಕ್ಸ್..!? ಯಾರು ಇನ್.? ಯಾರು ಔಟ್..?

ಬೆಂಗಳೂರು: ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ತನ್ನ ಆಧಿಪತ್ಯ ಸಾಧಿಸಿದೆ. ಉಪ ಚುನಾವಣೆಯಲ್ಲಿ ಬಿಜೆಪಿ ಎರಡು ಸ್ಥಾನಗಳನ್ನು ಗೆಲುವು ಸಾಧಿಸಿದ ನಂತರ ಇದೀಗ ಸಚಿವ ಸಂಪುಟ ವಿಸ್ತರಣೆಗೆ ಮಹೂರ್ತ ಫಿಕ್ಸ್ ಆಗುವ ಸಾಧ್ಯತೆ ಹೆಚ್ಚಿದೆ. ಸದ್ಯ ಈಗಿರುವ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ಆಗಲಿದೆ. ಎಲ್ಲವೂ ನಿರೀಕ್ಷೆಯಂತೆ ನಡೆದರೆ ಇದೇ ನವೆಂಬರ್ 18ರಂದು ಸಚಿವ ಸಂಪುಟ ವಿಸ್ತರಣೆಯಾಗುವುದು ಪಕ್ಕಾ ಎನ್ನಲಾಗುತ್ತಿದೆ.

ಸದ್ಯ ಇರುವ ನಾಲ್ವರು ಸಚಿವರನ್ನು ಕೈಬಿಟ್ಟು ಜೊತೆಗೆ ಉಳಿದ ಕೆಲವು ಖಾತೆಗಳನ್ನು ಬದಲಾವಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಇನ್ನು ಈ ಬಾರಿ ಸಂಪುಟದಲ್ಲಿ ಹೊಸಬರಿಗೆ ಆದ್ಯತೆ ನೀಡುವ ಸಾಧ್ಯತೆ ಹೆಚ್ಚಿದೆ. ಇನ್ನು ಬಿಜೆಪಿ ಮೂಲಗಳಿಂದ ಕೇಳಿಬರುತ್ತಿರುವ ಪ್ರಕಾರ ದೀಪಾವಳಿ ಹಬ್ಬದ ನಂತರ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಚಿವ ಸಂಪುಟದಲ್ಲಿ ಭಾರಿ ಬದಲಾವಣೆಯಾಗುವ ಸಾಧ್ಯತೆ ದಟ್ಟವಾಗಿದೆ. ಸದ್ಯ ಅಧಿಕಾರದಲ್ಲಿರುವ ಕೆಲವು ಸಚಿವರಿಗೆ ಕೊಕ್ ನೀಡುವುದು ಬಹುತೇಕ ಖಚಿತ ಅಂತ ಹೇಳಲಾಗುತ್ತಿದೆ. ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಬಿಜೆಪಿ ಹೈಕಮಾಂಡ್ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಬಿಜೆಪಿ ವರಿಷ್ಠರು ಹಸಿರು ನಿಶಾನೆ ತೋರಿಸಿದರೆ ಇದೇ ನವಂಬರ್ 18 ನೇ ತಾರೀಖು ನೂತನ ಸಚಿವರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಇನ್ನು ಸಚಿವರಾದ ಶಶಿಕಲಾ ಜೊಲ್ಲೆ, ಸಿ.ಸಿ.ಪಾಟೀಲ್, ಪ್ರಭು ಚೌಹಾಣ್, ಕೋಟಾ ಶ್ರೀನಿವಾಸ ಪೂಜಾರಿ ಸೇರಿದಂತೆ ಮೂರರಿಂದ ನಾಲ್ಕು ಸಚಿವರು ಸ್ಥಾನ ಕಳೆದುಕೊಳ್ಳಲಿದ್ದಾರೆ. ಇನ್ನು ಸಚಿವ ಸಂಪುಟ ಪೂರ್ಣ ಪ್ರಮಾಣದಲ್ಲಿ ರಚಿಸಬೇಕಾಗಿದ್ದು, ಯಾವ ಯಾವ ಸಚಿವರನ್ನು ಕೈಬಿಡಬೇಕು ಎಂಬ ವಿಚಾರಕ್ಕೆ ಸಂಬಂಧಪಟ್ಟಂತೆ ಬಿ.ಎಸ್. ಯಡಿಯೂರಪ್ಪ ವರಿಷ್ಠರ ಜತೆ ಮಾತುಕತೆ ನಡೆಸಲಿದ್ದಾರೆ. ಇನ್ನು ಬಿಜೆಪಿ ಮೂಲಗಳ ಪ್ರಕಾರ ಮೂರರಿಂದ ನಾಲ್ಕು ಸಚಿವರನ್ನು ಸಂಪುಟದಿಂದ ಕೈ ಬಿಡುವ ಇಶ್ಚೆಯನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಸದ್ಯ ಖಾಲಿ ಇರುವ ಸಚಿವ ಸ್ಥಾನಗಳನ್ನು ಸೇರಿಸಿ ಹಿರಿಯ ಶಾಸಕ ಉಮೇಶ್ ಕತ್ತಿ, ಎಂಪಿ ರೇಣುಕಾಚಾರ್ಯ, ಅರವಿಂದ ಲಿಂಬಾವಳಿ, ತಿಪ್ಪಾರೆಡ್ಡಿ, ಅಂಗಾರ, ಹಾಲಾಡಿ ಶ್ರೀನಿವಾಸ ಶೆಟ್ಟಿ, ಮೇಲ್ಮನೆ ಸದಸ್ಯರಾದ ಎಂಟಿಬಿ ನಾಗರಾಜ್, ಆರ್,ಶಂಕರ್ ಅವರಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆ ಇದೆ ಎಂದು ಎನ್ನಲಾಗುತ್ತಿದೆ. ಸದ್ಯ ಖಾಲಿ ಇರುವ 7 ಸಚಿವ ಸ್ಥಾನಗಳ ಪೈಕಿ ಮೂರು ಸ್ಥಾನಗಳು ಬಿಜೆಪಿ ಸರ್ಕಾರ ರಚನೆಗೆ ಟೊಂಕ ಕಟ್ಟಿ ನಿಂತಿದ್ದ ಆರ್.ಶಂಕರ್, ಎಂಟಿಬಿ ನಾಗರಾಜ್ ಹಾಗೂ ಮುನಿರತ್ನ ಅವರಿಗೆ ಫಿಕ್ಸ್ ಆಗಿದೆ.‌ ಇನ್ನು ಹುಕ್ಕೇರಿ ಸಾಹುಕಾರ ಹಿರಿಯ ಶಾಸಕ ಉಮೇಶ್ ಕತ್ತಿಯವರಿಗೆ, ಸಿಎಂ ಯಡಿಯೂರಪ್ಪ ಈಗಾಗಲೇ ಹಲವು ಬಾರಿ ಸಚಿವ ಸ್ಥಾನದ ಭರವಸೆ ನೀಡಿರುವುದರಿಂದ ಇದೀಗ ಉಮೇಶ್ ಕತ್ತಿಯವರನ್ನು ಸಂಪುಟಕ್ಕೆ ಸೇರಿಸಿಕೊಂಡು ಬೆಳಗಾವಿ ಜಿಲ್ಲೆಯಿಂದ ಒಬ್ಬರಿಗೆ ಕೋಕ್ ಕೊಡುವುದು ಅನಿವಾರ್ಯವಾಗುತ್ತದೆ.

error: Content is protected !!