ಕೂಗು ನಿಮ್ಮದು ಧ್ವನಿ ನಮ್ಮದು

೧೩೩ ವರ್ಷದ ಹಳೆಯ ಸರ್ಕಾರಿ ಶಾಲೆಯನ್ನು ದತ್ತು ಪಡೆದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಸುದೀಪ್ ಅವರು ೧೩೩ ವರ್ಷ ಹಳೆಯ ಶಾಲೆಯನ್ನು ದತ್ತು ಪಡೆಯುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇನ್ನೂ ಶಿವಮೊಗ್ಗ ನಗರದ B.H ರಸ್ತೆಯಲ್ಲಿರುವ ಸರ್ಕಾರಿ ಕನ್ನಡ ಪ್ರಧಾನ ಹಿರಿಯ ಪ್ರಾಥಮಿಕ ಶಾಲೆಯನ್ನು ಕಿಚ್ಚ ಚಾರಿಟೇಬಲ್ ಟ್ರಸ್ಟ್ ದತ್ತು ಪಡೆದುಕೊಂಡಿದೆ. ಜೊತೆಗೆ ಈ ಶಾಲೆಯು ಅಂದಾಜು ೧೩೩ ವರ್ಷಗಳಷ್ಟು ಹಳೆಯದು. ಇನ್ನೂ ಈ ಶಾಲೆಯನ್ನು ನಾವು ನೀವು ಯೋಜನೆ ಅಡಿಯಲ್ಲಿ ಇದನ್ನು ದತ್ತು ಪಡೆಯಲಾಗಿದೆ. ಇನ್ನೂ ಶಾಲೆಯ ಶೈಕ್ಷಣಿಕ ಚಟುವಟಿಕೆಗಳಿಗೆ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗುವಂತಹ ಕೆಲಸಗಳನ್ನು ಸುದೀಪ್ ಚಾರಿಟೇಬಲ್ ಟ್ರಸ್ಟ್ ಈಗಾಗಲೆ ಮಾಡುತ್ತಿದೆ.

ಇನ್ನೂ ಈ ಹಿಂದೆಯೂ ಸಹ ಕಿಚ್ಚ ಸುದೀಪ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕೆಲವು ಶಾಲೆಗಳನ್ನು ದತ್ತು ಪಡೆಯಲಾಗಿತ್ತು. ಜೊತೆಗೆ ಮಕ್ಕಳ ಸಂಖ್ಯೆಯ ಕೊರತೆಯ ಕಾರಣ ನೀಡಿ ಕೆಲವೆಡೆ ಶಾಲೆಗಳನ್ನು ಮುಚ್ಚಲಾಗುತ್ತಿತ್ತು. ಹೀಗಾಗಿ ಇದರಿಂದಾಗಿ ಬಡಮಕ್ಕಳ ಶಿಕ್ಷಣಕ್ಕೆ ಯಾವುದೇ ತೊಂದರೆ ಆಗಬಾರದೆಂದು ಕಿಚ್ಚ ಸುದೀಪ್ ಅವರು ಈ ಶಾಲೆಯನ್ನು ದತ್ತು ಪಡೆದಿದ್ದಾರೆ.

ಇನ್ನೂ ಸರ್ಕಾರಿ ಶಾಲೆಗಳನ್ನು ಉಳಿಸಬೇಕು ಎಂದು ಅನೇಕ ಸೆಲೆಬ್ರಿಟಿಗಳು ಕೂಡ ಎಷ್ಟೋ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಈಗ ಕಿಚ್ಚ ಸುದೀಪ್ ಅವರು ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇನ್ನೂ ಕಿಚ್ಚ ಸುದೀಪ್ ಚಾರಿಟೇಬಲ್ ಟ್ರಸ್ಟ್ ಹಗಲು ಇರುಳು ಕೆಲಸ ಮಾಡುತ್ತಿದ್ದಾರೆ. ಜೊತೆಗೆ ರಾಜ್ಯದ ಕೆಲವು ಭಾಗಗಳಲ್ಲಿ ಅಗತ್ಯ ಇರುವವರಿಗೆ ಸಹಾಯ ಮಾಡುವಲ್ಲಿ ಕಿಚ್ಚ ಸುದೀಪ್ ಚಾರಿಟೇಬಲ್ ಟ್ರಸ್ಟ್ ತೊಡಗಿಕೊಂಡಿದೆ. ಇದರ ಮದ್ಯೆ ಕಿಚ್ಚ ಚಾರಿಟೇಬಲ್ ಟ್ರಸ್ಟ್ ಕನ್ನಡ ಶಾಲೆಯೊಂದನ್ನು ದತ್ತು ಪಡೆಯುವ ಮೂಲಕ ಮತ್ತೆ ಎಲ್ಲಡೆ ಸುದ್ದಿಯಾಗಿದೆ.

error: Content is protected !!