ಕೊಡಗು: ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಗಣಗೂರು ಉಂಜಿಗನ ಹಳ್ಳಿಯಲ್ಲಿ ಅಮ್ಮನ ಸೀರೆ ತಗೆದುಕೊಂಡು ಆಟವಾಡುತ್ತಿದ್ದ ಮಕ್ಕಳು,ಆ ಅಮ್ಮನ ಸೀರೆಯಲ್ಲಿ ಆಟವಾಡುತ್ತಿದ್ದಾಗ ಜೋಕಾಲಿ ಉರುಳಾಗಿ ಸುತ್ತಿಕೊಂಡ ಪರಿಣಾಮ ಸ್ಥಳದಲ್ಲಿಯೇ ಮಕ್ಕಳು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಗ್ರಾಮದ ರಾಜು ಹಾಗೂ ಜಯಂತಿ ದಂಪತಿಗಳ ಇಬ್ಬರು ಮಕ್ಕಳಾದ ಪುತ್ರಿ ಪ್ರತಿಕ್ಷ (14) ಮಗ ಪೂರ್ಣೆಶ್ (12) ಮೃತ ದುರ್ಧೈವಿಗಳು, ಮನೆಯಲ್ಲಿ ಯಾರು ಇಲ್ಲದ ವೇಳೆ ನಡೆದ ಈ ಅವಘಡದಿಂದ ಹೆತ್ತ ತಂದೆ ತಾಯಿ ಮತ್ತು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಸ್ಥಳಕ್ಕೆ ಸೋಮವಾರಪೇಟೆ ಪೊಲೀಸ್ ವೃತ್ತ ನಿರೀಕ್ಷಕ ಮಹೇಶ್, ಸಬ್ ಇನ್ಸ್ಪೆಕ್ಟರ್ ಶ್ರೀಧರ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.