ಕೂಗು ನಿಮ್ಮದು ಧ್ವನಿ ನಮ್ಮದು

ಶಾಲಾ ಪಠ್ಯ ಪುಸ್ತಕ ವಿಚಾರದಲ್ಲಿ ಕಾಂಗ್ರೆಸ್ ರಾಜಕಾರಣ ಮಾಡ್ತಿದೆ; ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಶಾಲಾ ಪಠ್ಯ ಪುಸ್ತಕ ವಿಚಾರದಲ್ಲಿ ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಿಡಿಕಾರಿದ್ದಾರೆ. ‘ಸರ್ಕಾರ ಯಾವಾಗಲೂ ವ್ಯಕ್ತಿಗಳ ಆಧಾರದಲ್ಲಿ ನಡೆಯುವುದಿಲ್ಲ. ಶಾಸನದ ಆಧಾರದಲ್ಲಿ ಸರ್ಕಾರ ನಡೆಯುವುದು.

ಒಂದು ಸರ್ಕಾರ ಮಾಡಿದ ನಿರ್ಧಾರವನ್ನು ಮತ್ತೊಂದು ಸರ್ಕಾರ ಪರಿಶೀಲನೆ ಮಾಡದೆ ಪಠ್ಯ ಬದಲು ಮಾಡುವುದು ಸರಿಯಲ್ಲ. ಬನ್ನಂಜೆ ಗೋವಿಂದಾಚಾರ್ಯರ ಪಾಠ ವಾಪಸ್ ಖಂಡನಾರ್ಹವಾದದ್ದು, 2009ರಲ್ಲಿ ಯುಪಿಎ ಸರ್ಕಾರ ಬನ್ನಂಜೆ ಅವರಿಗೆ ಪದ್ಮಶ್ರೀ ನೀಡಿತ್ತು. ಇನ್ನು ಹೆಡ್ಗೇವಾರ್ ಪಾಠ, ಚಕ್ರವರ್ತಿ ಸೂಲಿಬೆಲೆ ಪಾಠ ವಾಪಸ್ ಪಡೆಯುವುದಾಗಿ ಸರ್ಕಾರ ಹೇಳಿದೆ. ಈ ಮೂಲಕ ವೈಚಾರಿಕ ವಿಚಾರದ ಮೇಲೆ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದರು

error: Content is protected !!