ಎಂಎಲ್ಸಿ ಸ್ಥಾನಕ್ಕೆ ರಾಜಿನಾಮೆ ಕೊಡುವ ಲಕ್ಷ್ಮಣ ಸವದಿ
ಬೆಂಗಳೂರು: ಇಂದು ಸಂಜೆ 4ಕ್ಕೆ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಭೇಟಿಯಾಗಿ, ರಾಜೀನಾಮೆ ಸಲ್ಲಿಸುವೆ. ನಂತರ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುವೆ. ಬಿಜೆಪಿ ತೊರೆಯಲು ನಿನ್ನೆಯೇ ನಿರ್ಧಾರ ಮಾಡಿದ್ದೇನೆ.
ಹಾಗಾಗಿ ಬಿಜೆಪಿಯ ಯಾವುದೇ ನಾಯಕರನ್ನು ಭೇಟಿಯಾಗಲ್ಲ. ನಾನು ಇನ್ನೂ ಬಿಜೆಪಿ ಮನೆಯಲ್ಲೇ ಇದ್ದೇನೆ, ಬೇರೆ ಮಾತಾಡಲ್ಲ. ಬಿಜೆಪಿಗೆ ರಾಜೀನಾಮೆ ಸಲ್ಲಿಸಿದ ನಂತರ ಬೇರೆ ವಿಚಾರದ ಚರ್ಚೆ ಎಂದು ಲಕ್ಷ್ಮಣ ಸವದಿ ಹೇಳಿದ್ದಾರೆ.