ಕೂಗು ನಿಮ್ಮದು ಧ್ವನಿ ನಮ್ಮದು

ಮೋದಗಾದಲ್ಲಿ 10 ಲಕ್ಷ ರೂ. ವೆಚ್ಚದ ಕಾಮಗಾರಿಗೆ ಪೂಜೆ ನೆರವೇರಿಸಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್

ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದ ಮೊದಗಾ ಗ್ರಾಮದಲ್ಲಿ ಮಾರುತಿ ಮಂದಿರದ ಸಮುದಾಯ ಭವನ ನಿರ್ಮಾಣಕ್ಕೆ ಶಾಸಕರ ನಿಧಿಯಿಂದ ಒಟ್ಟೂ 5 ಲಕ್ಷ ರೂ. ಮಂಜೂರು ಮಾಡಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್, ಗುರುವಾರ ಕಾಮಗಾರಿ ಆರಂಭಕ್ಕೆ ಪೂಜೆ ನೆರವೇರಿಸಿದರು.
ಈ ಪೈಕಿ ಮೊದಲ ಕಂತಿನಲ್ಲಿ 2.70 ಲಕ್ಷ ರೂ,ಗಳ ಚೆಕ್‌ ನ್ನು ದೇವಸ್ಥಾನದ ಕಮೀಟಿಯವರಿಗೆ ಹಸ್ತಾಂತರಿಸಿದರು.

ಜೊತೆಗೆ, ಶಾಸಕರ ಅನುದಾನದ ಒಟ್ಟು 5 ಲಕ್ಷ ರೂ,ಗಳ ವೆಚ್ಚದಲ್ಲಿ ನಿರ್ಮಲ ನಗರದ ಕಾರ್ಡಿನಲ್ ಗ್ರೇಸಿಯಸ್ ಆಸ್ಪತ್ರೆಯ ಒಳಾಂಗಣ ಕಾಂಕ್ರೀಟ್ ರಸ್ತೆಗಳ ನಿರ್ಮಾಣದ ಕಾಮಗಾರಿಗೆ ಭೂಮಿ ಪೂಜೆಯನ್ನು ಸಹ ನೆರವೇರಿಸಿದರು.

ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಸ್ಥಳೀಯ ಜನಪ್ರತಿನಿಧಿಗಳು, ಸ್ಥಳೀಯ ಮುಖಂಡರಾದ ಗಂಗಣ್ಣ ಕಲ್ಲೂರ, ಮಾಜಿ ತಾಲೂಕ ಪಂಚಾಯತ್ ಅಧ್ಯಕ್ಷ ಶಂಕರಗೌಡ ಪಾಟೀಲ, ದೇವಸ್ಥಾನದ ಪದಾಧಿಕಾರಿಗಳು, ಆಸ್ಪತ್ರೆಯ ಮುಖ್ಯಸ್ಥರು, ಆರೋಗ್ಯ ಸಿಬ್ಬಂದಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

error: Content is protected !!