ಕೂಗು ನಿಮ್ಮದು ಧ್ವನಿ ನಮ್ಮದು

ಏಪ್ರಿಲ್ 18ರಂದು ಲಕ್ಷ್ಮೀ ಹೆಬ್ಬಾಳಕರ್ ನಾಮಪತ್ರ ಸಲ್ಲಿಕೆ

ಏಪ್ರಿಲ್ 18ರಂದು ಲಕ್ಷ್ಮೀ ಹೆಬ್ಬಾಳಕರ್ ನಾಮಪತ್ರ ಸಲ್ಲಿಕೆಏಪ್ರಿಲ್ 18ರಂದು ಲಕ್ಷ್ಮೀ ಹೆಬ್ಬಾಳಕರ್ ನಾಮಪತ್ರ ಸಲ್ಲಿಕೆಏಪ್ರಿಲ್ 18ರಂದು ಲಕ್ಷ್ಮೀ ಹೆಬ್ಬಾಳಕರ್ ನಾಮಪತ್ರ ಸಲ್ಲಿಕೆ

ಬೆಳಗಾವಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಿಂದ ಮರು ಆಯ್ಕೆಬಯಸಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಏಪ್ರಿಲ್ 18ರಂದು ಅಪಾರ ಬೆಂಬಲಿಗರೊಂದಿಗೆ ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ.

ಅಂದು ಬೆಳಗ್ಗೆ ಹಿಂಡಲಗಾ ಗಣಪತಿ ಹಾಗೂ ಸುಳೇಬಾವಿ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಲಕ್ಷ್ಮೀ ಹೆಬ್ಬಾಳಕರ್ ನಂತರ ಬೆಂಬಲಿಗರೊಂದಿಗೆ ತೆರಳಿ ನಾಮಪತ್ರ ಸಲ್ಲಿಸುವರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹಲವಾರು ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ.

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಈಗಾಗಲೆ ನಿರಂತರ ಪ್ರಚಾರದಲ್ಲಿ ತೊಡಗಿಕೊಂಡಿರುವ ಲಕ್ಷ್ಮೀ ಹೆಬ್ಬಾಳಕರ್, ಇಡೀ ಕ್ಷೇತ್ರಾದ್ಯಂತ ಭಾರೀ ಬೆಂಬಲ ವ್ಯಕ್ತವಾಗುತ್ತಿದೆ. ಕಳೆದ ಬಾರಿ ಒಂದು ಲಕ್ಷಕ್ಕಿಂತ ಹೆಚ್ಚು ಮತ ಪಡೆದು, 50 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದೇನೆ. ಕಳೆದ 5 ವರ್ಷದಲ್ಲಿ ಕ್ಷೇತ್ರದಲ್ಲಿ ಭಾರಿ ಪ್ರಮಾಣದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಮಾಡಿರುವುದರಿಂದ ಈ ಬಾರಿ ಹಿಂದಿನಕ್ಕಿಂತ ಹೆಚ್ಚಿನ ಅಂತರದಿಂದ ಗೆಲ್ಲುವುದು ನಿಶ್ಚಿತ ಎನ್ನುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕ್ಷೇತ್ರದ ಎಲ್ಲೇ ಹೋದರೂ ಮನೆ ಮಗಳೆಂದು ಅತ್ಯಂತ ಪ್ರೀತಿ, ವಿಶ್ವಾಸ, ಅಭಿಮಾನದಿಂದ ಜನರು ಬರಮಾಡಿಕೊಳ್ಳುತ್ತಿದ್ದಾರೆ. ಮತ್ತೊಮ್ಮೆ ನೀವೇ ಆರಿಸಿ ಬರಬೇಕೆಂದು ಹಾರೈಸುತ್ತಿದ್ದಾರೆ. ಜನರ ಸೇವೆ ಮಾಡಲು ಮತ್ತೆ ಅವಕಾಶ ಸಿಗುವುದು ನಿಶ್ಚಿತವಾಗಿದೆ. ಕ್ಷೇತ್ರದ ಜನರ ಪ್ರೀತಿಗೆ ಸದಾ ಋಣಿಯಾಗಿರುತ್ತೇನೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!