ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಮುತಗಾ ಗ್ರಾಮದಲ್ಲಿ ನೂತನ ಅಂಗನವಾಡಿ ಕಟ್ಟಡದ ಕಾಮಗಾರಿಗೆ ಇಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಚಾಲನೆಯನ್ನು ನೀಡಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆಯ ಒಟ್ಟು 14 ಲಕ್ಷ ರೂ.ಗಳ ವೆಚ್ಚದಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣವಾಗಲಿದೆ.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷ, ಉಪಾಧ್ಯಕ್ಷರು, ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.