ಕೂಗು ನಿಮ್ಮದು ಧ್ವನಿ ನಮ್ಮದು

ಮುತಗಾದಲ್ಲಿ ಜಲಜೀವನ್ ಮಿಷನ್ ಕಾಮಗಾರಿಗೆ ಚಾಲನೆ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಮುತಗಾ ಗ್ರಾಮದಲ್ಲಿ ಕುಡಿಯುವ ನೀರಿನ ಅನುಕೂಲತೆಗೋಸ್ಕರ ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ ಸುಮಾರು ೫ ಕೋಟಿ ರೂ,ಗಳ ವೆಚ್ಚದಲ್ಲಿ ಪ್ರತಿ ಮನೆಗೆ ಪೈಪ್ ಲೈನ್ ಜೋಡಿಸುವ ಕಾಮಗಾರಿಗಳಿಗೆ ಚಾಲನೆಯನ್ನು ನೀಡಲಾಯಿತು.

ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರ ಅನುಪಸ್ಥಿತಿಯಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಸಂಸದೆ ಮಂಗಲಾ ಅಂಗಡಿ, ಹರ್ಷ ಶುಗರ್ಸ್ ವ್ಯವಸ್ಥಾಪಕ ನಿರ್ದೇಶಕ ಚನ್ನರಾಜ ಹಟ್ಟಿಹೊಳಿ ಕಾಮಗಾರಿಗೆ ಚಾಲನೆ ನೀಡಿದರು. ಕಾಮಗಾರಿಯನ್ನು ತ್ವರಿತ ಗತಿಯಲ್ಲಿ ಮುಗಿಸಬೇಕು. ರಸ್ತೆ ಹಾಳಾಗದಂತೆ, ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಚನ್ನರಾಜ ಹಟ್ಟಿಹೊಳಿ ಗುತ್ತಿಗೆದಾರರಿಗೆ ಸೂಚಿಸಿದರು.ಈ ಪೈಪ್ ಲೈನ್ ಕಾಮಗಾರಿಗಳು ಮುತಗಾ ಹಾಗೂ ಮುತಗಾ ಗ್ರಾಮದ ವಿಸ್ತರಣೆಯ ಪ್ರದೇಶಗಳನ್ನು ಒಳಗೊಂಡಿದ್ದು, ನೇರವಾಗಿ ಮನೆ ಮನೆಗಳಿಗೆ ನಲ್ಲಿಗಳ ಮೂಲಕ ನೀರು ಪೂರೈಕೆಯಾಗಲಿದೆ.

ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಸ್ಥಳೀಯ ಜನಪ್ರತಿನಿಧಿಗಳು, ತಾಲೂಕ ಪಂಚಾಯತ್ ಮಾಜಿ ಅಧಕ್ಷ ಶಂಕರಗೌಡ ಪಾಟೀಲ, ಮೃಣಾಲ ಹೆಬ್ಬಾಳಕರ್, ನಾಗೇಶ ದೇಸಾಯಿ, ಶ್ಯಾಮ್ ಮುತಗೇಕರ್, ಗಜು ಕಣಬರ್ಕರ್, ಜೇತನ್ ಚೌಗುಲೆ, ಮಾರುತಿ ಪಾಟೀಲ, ಸುನೀಲ ಅಷ್ಟೇಕರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

error: Content is protected !!