ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ 5 ವರ್ಷಗಳ ಕಾಲ ಮುಂದುವರಿಯುತ್ತಾರೆ, ಅಧಿಕಾರ ಹಂಚಿಕೆ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ನಿನ್ನೆ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದ ಸಚಿವ ಎಂಬಿ ಪಾಟೀಲ್ ಇಂದು ನಗರದಲ್ಲಿ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದರು.
ರಾಜ್ಯದಲ್ಲಿ ಮುಖ್ಯಮಂತ್ರಿ ಮತ್ತು ಉಪ,ಮುಖ್ಯಮಂತ್ರಿಗಳು 5 ವರ್ಷಗಳ ಕಾಲ ಮುಂದುವರಿಯಲಿದ್ದಾರೆ, ಮುಂದಿನ ವರ್ಷ ನಡೆಯುವ ಸಾರ್ವತ್ರಿಕ ಚುನಾವಣೆವರೆಗೆ ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಹೇಳಿದ್ದನ್ನೇ ತಾನು ಪುನರುಚ್ಛರಿಸಿರುವುದಾಗಿ ಪಾಟೀಲ್ ಹೇಳಿದರು. ಈ ವಾಕ್ಯಗಳನ್ನು ಅವರು ಮೂರು ಬಾರಿ ಪುನರಾವರ್ತಿಸಿದರು.