ಕೂಗು ನಿಮ್ಮದು ಧ್ವನಿ ನಮ್ಮದು

ಶಿವಮೊಗ್ಗದಲ್ಲಿ ಇಬ್ಬರು ಮಹಿಳೆಯರಿಗೆ ಮಂಗನಕಾಯಿಲೆ ದೃಢ

ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ 2 ಮಹಿಳೆಯರಿಗೆ ಮಂಗನ ಕಾಯಿಲೆ ದೃಢಪಟ್ಟಿದೆ.
ದಾವಣಗೆರೆ ಮೂಲದ ನಾಲವತ್ತು ವರ್ಷದ ಮಹಿಳೆ ಕೆಲಸಕ್ಕೆಂದು ತೀರ್ಥಹಳ್ಳಿಗೆ ಬಂದಿದ್ದರು. ಆದ್ರೆ ಅವರು ತೀವ್ರ ಜ್ವರದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಮಹಿಳೆಯನ್ನು ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ವೇಳೆ ಅವರಿಗೆ ಮಂಗನ ಕಾಯಿಲೆ ಇರುವುದು ದೃಢವಾಗಿದೆ.

2 ಮಹಿಳೆಯರಲ್ಲಿ ಒಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದಾರೆ. ಮತ್ತೊಬ್ಬ ಮಹಿಳೆಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
ಒಟ್ಟಾರೆಯಾಗಿ ಕಳೆದ ವರ್ಷ ಮಲೆನಾಡಿಗರ ನಿದ್ದೆ ಗೆಡಿಸಿದ್ದ ಮಂಗನ ಕಾಯಿಲೆ ಭೀತಿ ಇದೀಗ ಶಿವಮೊಗ್ಗ ಜಿಲ್ಲೆಗೆ ಕಾಲಿಟ್ಟಿದೆ. ಜಿಲ್ಲೆಯ 2 ಮಹಿಳೆಯರಲ್ಲಿ ಮಂಗನ ಕಾಯಿಲೆ ಪತ್ತೆಯಾದ ಹಿನ್ನೆಲೆಯಲ್ಲಿ ಆ ಭಾಗದ ಜನರು ಆತಂಕಗೊಂಡಿದ್ದಾರೆ.

error: Content is protected !!