ಕಲಬುರಗಿ: PSI ನೇಮಕಾತಿ ಅಕ್ರಮ ಪ್ರಕರಣದ ಮಂಜುನಾಥ್ ಮೇಳಕುಂದಿ ಭಾನುವಾರ ತಾನೇ CID ಕಚೇರಿಗೆ ಬಂದು ಶರಣಾಗಿದ್ದಾನೆ. ಕಲಬುರಗಿಯಲ್ಲಿ ಪರೀಕ್ಷೆಯ ಅಕ್ರಮ ಬಯಲಾಗಿತ್ತು. ಈ ಪ್ರಕರಣದ ಆರೋಪಿ ಆಗಿದ್ದ ಮಂಜುನಾಥ್ ಮೇಳಕುಂದಿ ಅವರು ನೀರಾವರಿ ಇಲಾಖೆ ಇಂಜನೀಯರ್ ಆಗಿ ಕೆಲಸ ಮಾಡುತ್ತಿದ್ದರು. ಆದ್ರೆ FIR ದಾಖಲಾದ ಬಳಿಕ ನಾಪತ್ತೆ ಆಗಿದ್ರು.
ಈ ಹಿನ್ನೆಲೆಯಲ್ಲಿ ಆರು ದಿನಗೊಳಗೆ ಶರಣಾಗಬೇಕು, ಇಲ್ಲದಿದ್ದರೇ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವುದಾಗಿ ಕೋಟ್ ಎಚ್ಚರಿಕೆ ನೀಡಿತ್ತು. ಇದೀಗ ಆಟೋದಲ್ಲಿ ಒಬ್ಬನೇ CID ಕಚೇರಿಗೆ ಆಗಮಿಸಿ ಶರಣಾಗಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಮಂಜುನಾಥ್, ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನ ಆರೋಗ್ಯ ಸರಿಯಿರಲಿಲ್ಲ.
ಹೀಗಾಗಿ ಮಂಗಳೂರಿಗೆ ಹೋಗಿದ್ದೆ. ಇವತ್ತು ಮುಂಜಾನೆ ಕಲಬುರಗಿಗೆ ಬಂದಿದ್ದೇನೆ. ನಂತರ ನಾನೇ CID ಮಂದೆ ಶರಣಾಗಲು ಬಂದಿದ್ದೇನೆ ಎಂದು ತಿಳಿಸಿದರು. PSI ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಹನ್ನೆರಡು ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನಲ್ಲೂ ಅಕ್ರಮ ನಡೆದಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಹನ್ನೆರಡು ಅಭ್ಯರ್ಥಿಗಳನ್ನು ಹೈಗ್ರೌಂಡ್ಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.