ಲಂಡನ್‌ನ ಓವಲ್‌ನಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯುಟಿಸಿ) ಫೈನಲ್‌ನಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರು ಪ್ಯಾಟ್ ಕಮಿನ್ಸ್ ಅವರ ನೇತೃತ್ವದ ಆಸ್ಟ್ರೇಲಿಯಾ ತಂಡದ ವಿರುದ್ಧ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.ಭಾರತವು ರವೀಂದ್ರ ಜಡೇಜಾ ಅವರನ್ನು ಏಕೈಕ ಸ್ಪಿನ್ನರ್ ಆಗಿ ಕಣಕ್ಕಿಳಿಸಿದೆ.
ಮೊಹಮ್ಮದ್ ಸಿರಾಜ್ ಮತ್ತು ಮೊಹಮ್ಮದ್ ಶಮಿ ಭಾರತಕ್ಕಾಗಿ ಸ್ಟಂಪ್‌ಗಳ ಮೇಲೆ ದಾಳಿ ಮಾಡುವುದನ್ನು ಮುಂದುವರೆಸಿದ್ದು,ಇನ್ನೊಂದೆಡೆಗೆ ಆಸಿಸ್ ಬ್ಯಾಟ್ಸಮನ್ ಗಳು ಅಪಾಯಕಾರಿ ಬೌಲಿಂಗ್ ದಾಳಿಯಿಂದ ತಪ್ಪಿಸಿಕೊಳ್ಳಲು ವಾರ್ನರ್ ಮತ್ತು ಲ್ಯಾಬುಸ್ಚಾಗ್ನೆ ಪರದಾಡುತ್ತಿದ್ದಾರೆ.
ಭಾರತವನ್ನು ಮುನ್ನಡೆಸುತ್ತಿರುವ ರೋಹಿತ್ ಶರ್ಮಾ ಅವರು ಒಂದು ವೇಳೆ ಈ ಟೆಸ್ಟ್ ಪಂದ್ಯವನ್ನು ಗೆದ್ದಿದ್ದೆ ಆದಲ್ಲಿ ಅಜಿಂಕ್ಯ ರಹಾನೆ ಮತ್ತು ಸೌರವ್ ಗಂಗೂಲಿ ಅವರ ದಾಖಲೆಯನ್ನು ಹಿಂದಿಕ್ಕಲಿದ್ದಾರೆ.
ಟೀಮ್ ಇಂಡಿಯಾ ಪರವಾಗಿ ಭರ್ಜರಿ ಬೌಲಿಂಗ್ ಮಾಡಿದ ಮೊಹಮ್ಮದ್ ಸಿರಾಜ್ ಅವರು ಆಸಿಸ್ ತಂಡದ ಉಸ್ಮಾನ್ ಕ್ಯ್ವಾಜಾ ಅವರನ್ನು ಶೂನ್ಯಕ್ಕೆ ಔಟ್ ಮಾಡಿದರು. ಈಗ ಕಣದಲ್ಲಿ ಡೇವಿಡ್ ವಾರ್ನರ್ ಹಾಗೂ ಮಾರ್ನಸ್ ಲ್ಯಾಬುಸ್ಚಾಗ್ನೆ ಕ್ರಮವಾಗಿ 13 ಹಾಗೂ 3 ರನ್ ಗಳೊಂದಿಗೆ ಬ್ಯಾಟಿಂಗ್ ಮಾಡುತ್ತಿದ್ದಾರೆ