ಕೂಗು ನಿಮ್ಮದು ಧ್ವನಿ ನಮ್ಮದು

ಕುಸ್ತಿಪಟು ಲಕ್ಷ್ಮೀ ಪಾಟೀಲ್ ಗೆ ಶುಭ ಹಾರೈಸಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ

ಬೆಳಗಾವಿ: ಆಗಸ್ಟ್ 24 ರಿಂದ 27 ರವರೆಗೆ ಹರಿಯಾಣದಲ್ಲಿ ನಡೆಯಲಿರುವ ಫೆಡರೇಷನ್ ಕಪ್ – ಹರಿಯಾಣ ರೋತಕ್ 2022 ರ 54 ಕೆಜಿ ವಿಭಾಗದ ಕುಸ್ತಿ ಪಂದ್ಯಾವಳಿಗಳಲ್ಲಿ ಭಾಗವಹಿಸಲು ತೆರಳುತ್ತಿರುವ ಹಲಗಾ ಬಸ್ತವಾಡ ಗ್ರಾಮದ ಲಕ್ಷ್ಮೀ ಸಂಜಯ ಪಾಟೀಲಗೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಶುಭ ಹಾರೈಸಿ ಬೀಳ್ಕೊಟ್ಟರು.

ಲಕ್ಷ್ಮೀಯ ಸಾಹಸ, ಧೈರ್ಯವನ್ನು ಮೆಚ್ಚಿ ಶಾಸಕಿ ಹೆಬ್ಬಾಳಕರ್ ಶುಭ ಹಾರೈಸಿದರು. ಗ್ರಾಮೀಣ ಭಾಗದ ಈ ಹುಡುಗಿ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ತನ್ನ ಕ್ರೀಡಾ ಸ್ಫೂರ್ತಿಯನ್ನು ಮೆರೆದು, ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವುದು ಬೆಳಗಾವಿ ಜಿಲ್ಲೆಗೆ ಹೆಮ್ಮೆಯ ಸಂಗತಿ ಎಂದು ಅವರು ಹೇಳಿದರು. ಲಕ್ಷ್ಮೀ ಪಾಟೀಲ ಕುಟುಂಬದವರು, ಗ್ರಾಮಸ್ಥರು ಈ ಸಂದರ್ಭದಲ್ಲಿ ಹಾಜರಿದ್ದರು.

error: Content is protected !!