ಕೂಗು ನಿಮ್ಮದು ಧ್ವನಿ ನಮ್ಮದು

ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲಿಸಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ; ತಾಲೂಕು ಪಂಚಾಯತ ಕಾರ್ಯಾಲಯದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ಕುರಿತು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಶುಕ್ರವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಪ್ರತಿಯೊಂದು ಗ್ರಾಮಗಳಿಗೆ ಸಂಬಂಧಿಸಿದಂತೆ ಅಭಿವೃದ್ಧಿಯ ಕೆಲಸಗಳ ಬಗ್ಗೆ ಎಲ್ಲ ಇಲಾಖೆಯ ಅಧಿಕಾರಿಗಳೊಂದಿಗೆ ಹಾಗೂ ಆಯಾ ಗ್ರಾಮಗಳ ಪಿಡಿಓ (PDO) ಅಧಿಕಾರಿಗಳ ಜೊತೆ ಚರ್ಚಿಸಿದ ಹೆಬ್ಬಾಳಕರ್, ಪ್ರಗತಿಯಲ್ಲಿರುವ ಎಲ್ಲ ಅಭಿವೃದ್ಧಿ ಕೆಲಸಗಳ ಸ್ಥಿತಿಗತಿಯ ಕುರಿತು ಮಾಹಿತಿ ಪಡೆದರು.
ಸರ್ಕಾರದ ಹಣವನ್ನು ಸಮರ್ಪಕವಾಗಿ ಅಭಿವೃದ್ಧಿಯ ಕೆಲಸಗಳಿಗೆ ಬಳಸಿಕೊಳ್ಳಬೇಕು. ಕಾಮಗಾರಿ ವಿಳಂಬವಾಗದಂತೆ ನೋಡಿಕೊಳ್ಳಬೇಕು. ಸಾರ್ವಜನಿಕರಿಂದ ಕಾಮಗಾರಿ ಗುಣಮಟ್ಟದ ಕುರಿತು ದೂರುಗಳು ಬಾರದಂತೆ ನಿಗವಹಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಲ ಜೀವನ ಮಿಷ‌ನ್, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ. (MGNREGA), 14 ನೇ ಮತ್ತು 15 ನೇ ಹಣಕಾಸು ಯೋಜನೆ, ವಿವಿಧ ವಸತಿ ಯೋಜನೆಗಳು, ಸ್ವಚ್ಛ ಭಾರತ್ ಮಿಷನ್ – ಗ್ರಾಮೀಣ, ಗ್ರಾಮ ಪಂಚಾಯತ ಮನೆ ಕರ ಮತ್ತು ನೀರಿನ ಕರ ವಸೂಲಿ, ಗ್ರಾಮ ಪಂಚಾಯತಿಯಲ್ಲಿ ಅನುಷ್ಠಾನಗೊಳ್ಳುವ. ವಿವಿಧ ಯೋಜನೆಗಳು, ಕೋವಿಡ್ 19 ಸಂಬಂಧಿಸಿದ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ತಾಲೂಕು ಪಂಚಾಯತ ಅಧ್ಯಕ್ಷ ಶಂಕರಗೌಡ ಪಾಟೀಲ, ತಹಶಿಲ್ದಾರ ಆರ್.ಕೆ. ಕುಲಕರ್ಣಿ, ಉಪವಿಭಾಗಾಧಿಕಾರಿ ರವೀಂದ್ರ ಕರಲಿಂಗಣ್ಣವರ, ಎಲ್ಲ ಇಲಾಖೆಯ ಅಧಿಕಾರಿಗಳು, ಆಯಾ ಗ್ರಾಮಗಳ ಪಿಡಿಓ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಉಪಸ್ಥಿತರಿದ್ದರು.

error: Content is protected !!