ಬೆಳಗಾವಿ: ಹುಕ್ಕೇರಿ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಗೆ ಸ್ಥಳೀಯ ವಿಧಾನ ಪರಿಷತ್ ಸದಸ್ಯರ ನಿಧಿಯಿಂದ 10 ಆಕ್ಸಿಜನ್ ಕಾಂನ್ಸಂಟ್ರೇಟರ್ ಗಳನ್ನು ಆಹಾರ ನಾಗರೀಕ ಪೂರೈಕೆ ಸಚಿವ ಉಮೇಶ್ ಕತ್ತಿ ಅಧ್ಯಕ್ಷತೆಯಲ್ಲಿ ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ವಿತರಿಸಿದರು. ಇನ್ನೂ ಈ ವೇಳೆ ದಿವಂಗತ ಸಾಹಿತಿಗಳಾದ ಡಾ.ಸಿದ್ದಲಿಂಗಯ್ಯನವರಿಗೆ ಶ್ರದ್ಧಾಂಜಲಿ ಅರ್ಪಿಸಿದರು. ಮತ್ತು ಆಶಾ ಕಾರ್ಯಕರ್ತೆಯರಿಗೆ ದಿನಸಿ ಕಿಟ್‌ಗಳನ್ನು ವಿತರಿಸಿ, ಕೊರೊನಾ ನಿಯಂತ್ರಣ ಹಾಗೂ ಅಭಿವೃದ್ಧಿ ಕಾರ್ಯಗಳ ಕುರಿತು ಅಧಿಕಾರಿಗಳ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.