ಬೆಳಗಾವಿ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಜ್ಯ ಉಸ್ತುವಾರಿಗಳಾದ ಶ್ರೀ ಅರುಣ್ ಸಿಂಗ್, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ರಾಜ್ಯಾಧ್ಯಕ್ಷರಾದ ನಳಿನಕುಮಾರ ಕಟಿಲ ಅವರ ನೇತೃತ್ವದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಬಿಜೆಪಿ ಪಕ್ಷದ “ರಾಜ್ಯ ಕಾರ್ಯಕಾರಣಿ ಸಭೆ”ಯಲ್ಲಿ ಬೆಳಗಾವಿ ಸಂಸದೆ ಮಂಗಳಾ ಅಂಗಡಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ C T Ravi , ಶಾಸಕ ಅನಿಲ್ ಬೆನಕೆ, ಅಭಯ್ ಪಾಟೀಲ್, ರಾಜ್ಯ ವಕ್ತಾರರಾದ ಎಂ.ಬಿ. ಝಿರಲಿ, ಬೆಳಗಾವಿ ಮಹಾನಗರ ಬಿಜೆಪಿ ಉಸ್ತುವಾರಿ ರಮೇಶ್ ದೇಶಪಾಂಡೆ, ಮಹಾನಗರ ಅಧ್ಯಕ್ಷ ಶಶಿಕಾಂತ್ ಪಾಟೀಲ್, ಮಹಾನಗರ ಬಿಜೆಪಿ ಪ್ರಧಾನಕಾರ್ಯದರ್ಶಿ ಗಿರೀಶ್ ಡೋಂಗಡೆ, ಮುರುಘೇಂದ್ರ ಪಾಟೀಲ್, ದಾದಾಗೌಡ ಬಿರಾದಾರ, ರಾಜ್ಯ ಯುವ ಮೋರ್ಚಾ ಸಮಿತಿ ಕಾರ್ಯದರ್ಶಿಗಳಾದ ಶ್ರೇಯಸ್ ನಾಕಡೆ ಸೇರಿದಂತೆ ರಾಜ್ಯ ಬಿಜೆಪಿಯ ಮುಖಂಡರು, ಪದಾಧಿಕಾರಿಗಳು, ಸಚಿವರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.