ಕೂಗು ನಿಮ್ಮದು ಧ್ವನಿ ನಮ್ಮದು

ಹಿಜಬ್ ತಂಟೆಗೆ ಬಂದರೆ ತುಂಡು ತುಂಡಾಗಿ ಕತ್ತರಿಸುತ್ತೇನೆ ಎಂದಿದ್ದ ಮುಕ್ರಂ ಖಾನ್: ಸೇಡಂ ಪೊಲೀಸರಿಂದ ಎಫ್ಐಆರ್

ಕಲಬುರಗಿ: ಹಿಜಾಬ್ ತಂಟೆಗೆ ಬಂದ್ರೆ ನಿಮ್ಮನ್ನು ತುಂಡು ತುಂಡಾಗಿ ಕತ್ತರಿಸುತ್ತೇನೆಂದು ವಿವಾದಾತ್ಮಕ ಹೇಳಿಕೆ ನೀಡಿದ ಕಾಂಗ್ರೆಸ್ ಮುಖಂಡ ಮುಕ್ರಂ ಖಾನ್ ವಿರುದ್ಧ FIR ದಾಖಲಾಗಿದೆ. ಕೆಲದಿನಗಳ ಹಿಂದೆಯೇ ಹಿಜಾಬ್ ತಂಟೆಗೆ ಬಂದ್ರೆ ಬಸವನಗೌಡ ಪಾಟೀಲ್ ಯತ್ನಾಳ್ ಹಾಗೂ ಆಂದೋಲಾ ಸ್ವಾಮಿಯನ್ನು ತುಂಡು, ತುಂಡಾಗಿ ಕತ್ತರಿಸುತ್ತೇನೆಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಮುಕ್ರಂ ಖಾನ್ ವಿರುದ್ಧ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು.

ಪ್ರತಿಭಟನೆ ನಂತರ ಇದೀಗ ಕಲಬುರಗಿ ಜಿಲ್ಲೆಯ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಿಂದೂಪರ ಸಂಘಟನೆಗಳು ಪೋಲೀಸ್ ಠಾಣೆಯ ಹತ್ತಿರ ಪ್ರತಿಭಟನೆ ನಡೆಸಿ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ಮನವಿಯನ್ನು ಸಲ್ಲಿಸಿದ್ರು. ಇದೀಗ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಚೋದನಕಾರಿ ಭಾಷಣ, ಕೋಮು ಸೌಹಾರ್ದತೆ ಕದುಡುವ ನಿಟ್ಟಿನಲ್ಲಿ ಹೇಳಿಕೆ ನೀಡಿರುವ ಹಿನ್ನೆಲೆ ಐಪಿಸಿ ಸೆಕ್ಷನ್ 153 ಮತ್ತು 294ರ ಅಡಿಯಲ್ಲಿ FIR ದಾಖಲಾಗಿದೆ.

error: Content is protected !!