ಕೂಗು ನಿಮ್ಮದು ಧ್ವನಿ ನಮ್ಮದು

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ

ಚಿಕ್ಕಬಳ್ಳಾಪುರ: ದುಷ್ಕರ್ಮಿಗಳು ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಭರವಾಗಿ ಕೊಲೆ ಮಾಡಿರುವ ಘಟನೆ
ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲ್ಲೂಕು ಜೋಡಿ ಬಿಸಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮುಖಂಡ ಬಿ.ಎನ್.ಶ್ರೀನಿವಾಸಮೂರ್ತಿ ಕೊಲೆಯಾದ ದುರ್ಧೈವಿಯಾಗಿದ್ದಾರೆ.

ಶ್ರೀನಿವಾಸ ಮೂರ್ತಿ ಎಂದಿನಂತೆ ಸೋಮವಾರ ರಾತ್ರಿ ಮನೆಯಲ್ಲಿ ‌ಊಟ ಮಾಡಿ ಜಮೀನು ಬಳಿ ತೆರಳಿದ್ದ. ಆದರೆ ಬೆಳಿಗ್ಗೆ ಮರಳಿ ಮನೆಗೆ ಬಂದಿರಲಿಲ್ಲ. ಅನುಮಾನಗೊಂಡ ಮಕ್ಕಳು ಜಮೀನಿನ‌ ಬಳಿ ತೆರಳಿ ನೋಡಿದಾಗ ಕೊಲೆ ಆಗಿರೋದು ಕಂಡುಬಂದಿದೆ.

ತಕ್ಷಣ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಮಾಹಿತಿ ತಿಳಿಸಿದ್ದಾರೆ. ಇನ್ನು
ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ಎಸ್ಪಿ ಮಿಥುನ್ ಕುಮಾರ್, ಡಿವೈಎಸ್ಪಿ ರವಿಶಂಕರ್ ಬೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗೆ ವಿಶೇಷ ತಂಡವನ್ನು ರಚಿಸಿದ್ದು ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು, ಕುಟುಂಬಸ್ಥರ ಆಕ್ರಂಧನ ಮುಗಿಲು ಮುಟ್ಟಿದೆ.

error: Content is protected !!