ನವದೆಹಲಿ: ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನಲ್ಲಿ ಕೃಷ್ಣ ನದಿಯ ಪ್ರವಾಹದಿಂದ ಕೃಷಿ ಭೂಮಿಯು ಫಲವತ್ತತೆಯನ್ನು ಕಳೆದುಕೊಂಡಿದೆ. ರೈತರಿಗೆ ಕೋಡುವ ಪರಿಹಾರದ ಮೊತ್ತವನ್ನು ಇನ್ನೂ ಹೆಚ್ಚಿಸಬೇಕೆಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಕೇಂದ್ರ ಸರ್ಕಾರಕ್ಕೆ ಇಂದು ಮನವಿ ಮಾಡಿದ್ರು.
ಜಮಖಂಡಿ ತಾಲೂಕಿನ ಉಪವಿಭಾಗದಲ್ಲಿ ಕೃಷ್ಣ ನದಿಯಿಂದ ಪದೇ ಪದೇ ಪ್ರವಾಹ ಉಂಟಾಗುವ ಸಲುವಾಗಿ, ರೈತರ ಜಮೀನಿನ ಫಲವತ್ತಾದ ಮಣ್ಣು ಕೊಚ್ಚಿ ಹೋಗುತ್ತಿದೆ.
ರೈತರು ಸರಿಯಾಗಿ ಬೆಳೆಗಳನ್ನು ಬೆಳೆಯಲು ಸಾಧ್ಯವಾಗುತ್ತಿಲ್ಲ. ಎಂದು ವಸ್ತುಸ್ಥಿತಿಯನ್ನು ಮುರಗೇಶ್ ನಿರಾಣಿ ಮನವರಿಕೆ ಮಾಡಿಕೊಟ್ರು. ೧ ಕಡೆ ರೈತರು ಪ್ರವಾಹದಿಂದ ತಮ್ಮ ಬೆಳೆಗಳನ್ನು ನಾಶ ಮಾಡಿಕೊಂಡಿದ್ದರೆ ಇನ್ನೊಂದು ಕಡೆ ಕೃಷಿ ಜಮೀನು ಫಲವತ್ತತೆಯನ್ನು ಕಳೆದುಕೊಂಡಿದ್ದರಿಂದ ರೈತರ ಮಣ್ಣಿನ ಸವಕಳಿ ಕೂಡ ಹೆಚ್ಚಿದೆ. ಹೀಗಾಗಿ ರೈತರು ಬೆಳೆಗಳನ್ನು ಬೆಳೆಯಲು ಸಾಧ್ಯವಾಗುತ್ತಿಲ್ಲ ಎಂದು ಮುರಗೇಶ್ ನಿರಾಣಿ ಹೇಳಿದ್ದಾರೆ.
ತಾಲೂಕಿನ ಒಟ್ಟು ೧೪,೦೫೧ ಹೆಕ್ಟೇರ್ ಪ್ರದೇಶದಲ್ಲಿ ೫,೯೯೪ ಪ್ರದೇಶವು ಸವಕಳಿಗೆ ತುತ್ತಾಗಿದೆ. ಪ್ರಸ್ತುತ ಒಂದು ಹೆಕ್ಟೇರ್ ಗೆ ೬೫,೦೦೦ ಪರಿಹಾರದನವನ್ನು ನೀಡಲಾಗುತ್ತಿದೆ. ಈ ಪ್ರದೇಶಗಳಲ್ಲಿ ಸಣ್ಣ, ಅತಿ ಸಣ್ಣ ಮತ್ತು ಕಡಿಮೆ ಆದಾಯ ಹೊಂದಿರುವ ರೈತರಿದ್ದು, ಕೃಷಿಯೇ ಇವರ ಜೀವನದ ಆಧಾರವಾಗಿದೆ. ಹಾಗಾಗಿ ಸರ್ಕಾರ ನೀಡುತ್ತಿರುವ ಹಣದಿಂದ ಇವರ ಜೀವನ ನಿರ್ವಹಣೆಗೆ ಸಾಕಾಗದ ಕಾರಣ, ಪರಿಹಾರದ ಮೊತ್ತವನ್ನು ಹೆಚ್ಚಳ ಮಾಡುವ ಅಗತ್ಯವಿದೆ ಎಂದು ಮುರಗೇಶ್ ನಿರಾಣಿ ಮನವಿ ಮಾಡಿಕೊಂಡ್ರು.
ಮುರಗೇಶ್ ನಿರಾಣಿ ಮನವಿಗೆ ಸೂಕ್ತವಾಗಿ ಸ್ಪಂಧಿಸಿದ ಶೋಭಾ ಕರಂದ್ಲಾಜೆ , ರೈತರ ಹಿತಕಾಪಾಡಲು ಕೇಂದ್ರ ಸರ್ಕಾರ ಬದ್ದವಾಗಿದೆ ಎಂಬ ಭರವಸೆಯನ್ನು ನೀಡಿದ್ರು. ಪ್ರತಿವರ್ಷ ಮಳೆಗಾಲದ ಸಮಯದಲ್ಲಿ ಕೃಷ್ಣ ನದಿಯ ಪ್ರವಾಹ ಮತ್ತು ಹಿನ್ನೀರಿನ ಕಾರಣ ಸಾವಿರಾರು ಕುಟುಂಬಗಳಿಗೆ ತೊಂದರೆ ಆಗುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ರೈತರಿಗೆ ನೀಡಲಾಗುತ್ತಿರುವ ಪರಿಹಾರದ ಮೊತ್ತವನ್ನು ಹೆಚ್ಚಳ ಮಾಡಬೇಕೆಂದು ನನ್ನ ಬಹಳ ದಿನಗಳ ಬೇಡಿಕೆಯಾಗಿದೆ. ಈ ಕುರಿತು ಸದ್ಯದಲ್ಲಿಯೇ ಅಧಿಕಾರಿಗಳ ಜೊತೆಗೆ ಚರ್ಚೆ ಮಾಡಿ ಸೂಕ್ತ ನ್ಯಾಯ ಒದಗಿಸುವ ಭರವಸೆಯನ್ನು ಶೋಭಾ ಕರಂದ್ಲಾಜೆ ನೀಡಿದ್ರು.