ಕೂಗು ನಿಮ್ಮದು ಧ್ವನಿ ನಮ್ಮದು

ಮೈಸೂರು ಮಹಿಳಾ ಅಧಿಕಾರಿಗಳ ಎತ್ತಂಗಡಿ: ವಿವಾದಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ

ಮೈಸೂರು: ಕಳೆದ ಮೂರ್ನಾಲ್ಕು ದಿನಗಳಿಂದ ಭಾರಿ ಸುದ್ದಿಯಲ್ಲಿದ್ದ ಮೈಸೂರು ಜಡೆ ಜಗಳವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಕೊನೆಗೂ ಇಬ್ಬರು ಮಹಿಳಾ ಐಎಎಸ್‌ ಅಧಿಕಾರಿಗಳನ್ನು ಎತ್ತಂಗಡಿ ಮಾಡಿದೆ. ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ತೀವ್ರ ಜಟಾಪಟಿ ನಡೆಸಿದ್ದ ಇಬ್ಬರೂ ಅಧಿಕಾರಿಗಳ ತಲೆದಂಡವನ್ನು ಸರ್ಕಾರ ಮಾಡಿದ್ದು, ಆ ಮೂಲಕ ಗೊಂದಲಕ್ಕೆ ತೆರೆ ಎಳೆದಿದೆ.

ರೋಹಿಣಿ ಸಿಂಧೂರಿ ಮತ್ತು ಶಿಲ್ಪಾನಾಗ್ ವರ್ಗಾವಣೆ

ಇದೀಗ ಮೈಸೂರು ಜಿಲ್ಲಾಧಿಕಾರಿಯಾಗಿ ಡಾ.ಬಗಡಿ ಗೌತಮ್ ನೇಮಕವಾಗಿದ್ದಾರೆ. ವಾಣಿಜ್ಯ ತೆರಿಗೆ ಹೆಚ್ಚುವರಿ ಆಯುಕ್ತರಾಗಿದ್ದ ಡಾ.ಗೌತಮ್ ಮೈಸೂರಿಗೆ ಬಂದಿದ್ರೆ, ರೋಹಿಣಿ ಸಿಂಧೂರಿ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಾಗಿ ವರ್ಗಾವಣೆಗೊಂಡದ್ದಾರೆ. ಇನ್ನು ಮಹಾನಗರ ಪಾಲಿಕೆ ಆಯುಕ್ತರಾಗಿ ಲಕ್ಷ್ಮಿಕಾಂತ್ ರೆಡ್ಡಿ ನೇಮಕವಾಗಿದ್ದು, ಅವರು ಈ ಹಿಂದೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಸಧ್ಯ
ಇಬ್ಬರನ್ನೂ ಎತ್ತಂಗಡಿ ಮಾಡುವ ಮೂಲಕ ರಾಜ್ಯ ಸರ್ಕಾರ ವಿವಾದಕ್ಕೆ ತೆರೆ ಎಳೆದಿದೆ.

error: Content is protected !!