ಕೂಗು ನಿಮ್ಮದು ಧ್ವನಿ ನಮ್ಮದು

‘ಮೈಸೂರು ಸ್ಯಾಂಡಲ್ ಸೋಪ್ ಬಳಸಲೂ ಹಿಂಜರಿಯುವಂತಾಗಿದೆ’: ನಾಗತಿಹಳ್ಳಿ ಚಂದ್ರಶೇಖರ್

ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ ನಿಯಮಿತ (ಕೆಎಸ್ಡಿಎಲ್) ಅಧ್ಯಕ್ಷರಾಗಿದ್ದ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಹಾಗೂ ಅವರ ಪುತ್ರ ಪ್ರಶಾಂತ್ ಮನೆಯಲ್ಲಿ ಕೋಟ್ಯಂತರ ರೂಪಾಯಿ ಹಣವನ್ನು ಲೋಕಾಯುಕ್ತ ಅಧಿಕಾರಿಗಳು ಪತ್ತೆ ಮಾಡಿರುವುದು ಸಂಚಲನ ಸೃಷ್ಟಿ ಮಾಡಿದೆ. ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಈ ಹಗರಣ ಬೆಳಕಿಗೆ ಬಂದಿರುವುದು ರಾಜ್ಯ ರಾಜಕಾರಣದಲ್ಲಿ ದೊಡ್ಡ ಚರ್ಚೆ ಹುಟ್ಟುಹಾಕಿದೆ. ಈ ಘಟನೆಗೆ ಸಂಬಂಧಿಸಿದಂತೆ ಅನೇಕರು ಪ್ರತಿಕ್ರಿಯೆ ನೀಡುತ್ತಿದ್ದಾರೆ. ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಕೂಡ ಟ್ವೀಟ್ ಮಾಡುವ ಮೂಲಕ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

ಮೈಸೂರು ಸ್ಯಾಂಡಲ್ ಸೋಪ್ ಗುಣಮಟ್ಟದ ಕುರಿತು ಅವರು ಅನುಮಾನ ವ್ಯಕ್ತಪಡಿಸಿದ್ದಾರೆ. ನಾಗತಿಹಳ್ಳಿ ಚಂದ್ರಶೇಖರ್ ಟ್ವೀಟ್ನಲ್ಲಿ ಏನಿದೆ?
‘ಮಾಡಾಳರು ಮಾಡಿರುವ ಭ್ರಷ್ಟತೆ ಹಾಗೂ ಕಲಬೆರಕೆಯ ಕಾರಣ ಸರ್ಕಾರಿ ಸ್ವಾಮ್ಯದ ಉದ್ಯಮ ಮತ್ತು ಉತ್ಪನ್ನಗಳಲ್ಲಿ ನಂಬಿಕೆ ಮತ್ತು ಗೌರವ ಇರಿಸಿದ ನನ್ನಂಥವರು ಬಹುಕಾಲದಿಂದ ಬಳಸುತ್ತಿದ್ದ ಮೈಸೂರು ಸ್ಯಾಂಡಲ್ ಸೋಪ್ ಬಳಸಲೂ ಹಿಂಜರಿಯುವಂತಾಗಿದೆ’ ಎಂದು ನಾಗತಿಹಳ್ಳಿ ಚಂದ್ರಶೇಖರ್ ಅವರು ಟ್ವೀಟ್ ಮಾಡಿದ್ದಾರೆ. ಅದಕ್ಕೆ ನೆಟ್ಟಿಗರು ಹಲವು ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

error: Content is protected !!