ಬೆಂಗಳೂರು: ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಟಿಕೆಟ್ ಸಿಗದ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬಿಜೆಪಿಗೆ ಮತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಸೇರುತ್ತಾರೆ ಎಂಬ ವಂದತಿಗಳು ಕೇಳಿಬರುತ್ತಿವೆ. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿ ಪಕ್ಷದ ಹಿರಿಯ ನಾಯಕರು ಜಗದೀಶ್ ಶೆಟ್ಟರ್ ಅವರ ಜತೆ ಮಾತುಕತೆ ನಡೆಸಿದ್ದರು. ಅವರಿಗೆ ಎಲ್ಲ ಗೌರವ ಪಕ್ಷ ಕೊಟ್ಟಿತ್ತು. ಎಲ್ಲ ಜವಾಬ್ದಾರಿಗಳನ್ನೂ ಕೊಟ್ಟಿತ್ತು. ಶೆಟ್ಟರ್ ಪಕ್ಷ ಬಿಟ್ಟಿದರಿಂದ ಪಕ್ಷಕ್ಕೆ ಏನು ಹಿನ್ನಡೆ ಆಗಿಲ್ಲ. ಅವರು ನಮ್ಮಲ್ಲೇ ಉಳಿದುಕೊಳ್ಳುತ್ತಾರೆ ಅಂತ ವಿಶ್ವಾಸವಿತ್ತು ಎಂದು ಹೇಳಿದ್ದಾರೆ.
ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ನಮ್ಮಲ್ಲಿ ಸಮುದಾಯದ ಪ್ರಶ್ನೆ ಬರಲ್ಲ. ಎಲ್ಲ ಸಮುದಾಯ ಗುರುತಿಸಿ ಟಿಕೆಟ್ ಕೊಡಲಾಗಿದೆ. ಎಲ್ಲ ಸಮುದಾಯಗಳಿಗೂ ಸಾಮಾಜಿಕ ನ್ಯಾಯದಡಿ ಸ್ಥಾನಮಾನ ಕೊಡಲಾಗಿದೆ. ಲಿಂಗಾಯತರನ್ನು ಗುರುತಿಸಿ ಸಿಎಂ ಮಾಡಿದ್ದು ನಮ್ಮ ಪಕ್ಷ ಮಾತ್ರವೇ ಎಂದು ಹೇಳಿದರು.
ಜಗದೀಶ್ ಶೆಟ್ಟರ್ಗೆ ಟಿಕೆಟ್ ಕೈತಪ್ಪಲು ಕಾರಣವೇನು? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಬೊಮ್ಮಾಯಿ
ಜಗದೀಶ್ ಶೆಟ್ಟರ್ ಮುಂದುವರೆಸಿಕೊಂಡು ಹೋದರೇ ಚೆನ್ನಾಗಿ ಇರುತ್ತಿತ್ತು. ನಮ್ಮ ಚುನಾವಣೆ ತಂತ್ರ ರೂಪಿಸುತ್ತವೆ. ಪಕ್ಷ ಗೆಲ್ಲತ್ತೆ. ಬದಲಾವಣೆ ತರುವಂತಹ ಕಾಲ ಇದು. ಒಂದು ಪೀಳಿಗೆಯಿಂದ ಮತ್ತೊಂದು ಪೀಳಿಗೆಗೆ ಅವಕಾಶ ಕೊಡಬೇಕಾಗಿತ್ತು. ಅದೇ ಕಾರಣಕ್ಕೆ ಜಗದೀಶ್ ಶೆಟ್ಟರ್ ಟಿಕೆಟ್ ತಪ್ಪಿದೆ. ರಾಜ್ಯ, ಜಿಲ್ಲಾ ಮಟ್ಟದ ಕೋರ್ ಕಮಿಟಿಯಲ್ಲಿ ಅವರ ಹೆಸರು ಇತ್ತು. ಆದ್ರೆ, ಟಿಕೆಟ್ ನಿರಾಕರಿಸಿರುವುದು ಮೇಲಿನ ತೀರ್ಮಾನ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.