ಕೂಗು ನಿಮ್ಮದು ಧ್ವನಿ ನಮ್ಮದು

ಮನೆ ಗೋಡೆ ಕುಸಿದು ಏಳು ಜನ ಸಾವು, ಎರಡು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ಮಳೆಗೆ ಹಳೆ ಮನೆಯ ಗೋಡೆ ಕುಸಿದು ಒಂದೇ ಕುಟುಂಬದ 6 ಜನ ಹಾಗೂ ಪಕ್ಕದ ಮನೆಯ ಬಾಲಕಿ ಸೇರಿ ಒಟ್ಟು 7 ಜನ ಮೃತಪಟ್ಟ ಘಟನೆ ನಿನ್ನೆ ಸಂಭವಿಸಿದೆ. ಘಟನೆ ಸಂಬಂಧಿಸಿದಂತೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ ೨ ಲಕ್ಷ ರೂಪಾಯಿ ಪರಿಹಾರ ದನವನ್ನು ಘೋಷಿಸಿದ್ದಾರೆ. ಬೆಳಗಾವಿಯಲ್ಲಿ ಸತತ ೩ ದಿನಗಳಿಂದ ಸುರಿಯುತ್ತಿದ್ದ ಮಳೆಗೆ ಹಳೆ ಗೋಡೆ ಒದ್ದೆ ಆಗಿತ್ತು. ಆ ಗೋಡೆ ಬೀಳುವುದನ್ನು ನೋಡಲು ಹೋಗಿದ್ದಾಗ ಈ ದುರಂತ ನಡೆದಿದೆ.

ಸುರೇಶ್ ಖಾನಗಾವಿ ಕುಟುಂಬದ ಲಕ್ಷ್ಮಿ ಅರ್ಜುನ್ ಖಾನಗಾವಿ(೧೫), ಶಾಂತವ್ವ ಭೀಮಪ್ಪ ಖಾನಗಾವಿ(೫೦), ಅರ್ಜುನ್ ಹನಮಂತ ಖಾನಗಾವಿ, ಸತ್ಯವ್ವ ಅರ್ಜುನ್ ಖಾನಗಾವಿ(೪೫), ಪೂಜಾ ಅರ್ಜುನ್ ಖಾನಗಾವಿ(೮), ಸವಿತಾ ಭೀಮಪ್ಪ ಖಾನಗಾವಿ(೨೮) ಹಾಗೂ ಪಕ್ಕದ ಮನೆಯ ಬಾಲಕಿ ಕಾಶವ್ವ ವಿಠ್ಠಲ ಕೊಳೆಪ್ಪನವರ(೮) ಮೃತಪಟ್ಟಿದ್ದಾರೆ. ಈ ಘಟನೆ ಬಗ್ಗೆ ಟ್ವಿಟ್ಟರ್ ಅಲ್ಲಿ ಸಂತಾಪ ಸೂಚಿಸಿ ಪ್ರಧಾನಿ ನರೇಂದ್ರ ಮೋದಿ ೨ ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.

ಸುರೇಶ್ ಖಾನಗಾವಿ ಕುಟುಂಬ ತಮ್ಮ ಹಳೆಯ ಮನೆಯನ್ನು ಬೀಳಿಸಿ ಹೊಸ ಮನೆ ಕಟ್ಟುವ ಸಿದ್ಧತೆಯಲ್ಲಿದ್ರು. ಅದಕ್ಕಾಗಿಯೇ ಪಕ್ಕದಲ್ಲಿ ಶೆಡ್ ನಿರ್ಮಿಸಿಕೊಂಡು ಅಲ್ಲೇ ವಾಸವಾಗಿದರು. ಗೋಡೆ ಕುಸಿಯುತ್ತಿದ್ದಂತೆ ಪ್ರಾಣ ರಕ್ಷಣೆಗೆ ಓಡಿದ್ರು ಪ್ರಾಣ ಉಳಿಯಲಿಲ್ಲ. ಅಂಗಡಿಗೆ ಹೋಗಿದ್ದ ಮನೆಯ ಯಜಮಾನ ಸುರೇಶ್ ಖಾನಗಾವಿ ಹಾಗೂ ಇನ್ನೊಬ್ಬ ಪುತ್ರ ಮಾತ್ರ ಬದುಕುಳಿದಿದ್ದಾರೆ. ಘಟನೆ ನಂತರ ಸುರೇಶ್ ಖಾನಗಾವಿಗೆ ದೂರವಾಣಿ ಕರೆ ಮಾಡಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಈ ದುರಂತದ ಬಗ್ಗೆ ಮಾಹಿತಿ ಪಡೆದು ಸಂತಾಪ ತಿಳಿಸಿ ಆ ಕುಟುಂಬಕ್ಕೆ ಧೈರ್ಯ ತುಂಬಿದ್ರು. ಅಲ್ಲದೆ ಮೃತರ ಕುಟುಂಬಕ್ಕೆ ಸಿಎಂ ೨ ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದರು.

error: Content is protected !!