ಚಂಡೀಗಢ: ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳು ಅಪರಾಧದ ಪಾಲುದಾರರು ಎಂದು ಪ್ರಧಾನಿ ನರೇಂದ್ರ ಮೋದಿ ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ರು. ಚುನಾವಣಾ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಮೋದಿಯವರು, ಎಎಪಿ ಕಾಂಗ್ರೆಸ್‍ನ ಫೋಟೋಕಾಪಿಯಾಗಿದೆ. ಅಯೋಧ್ಯೆಯಲ್ಲಿ ರಾಮ ಮಂದಿರ ಸೇರಿದಂತೆ ಸೇನೆಯಲ್ಲಿ ಏನನ್ನಾದ್ರು ಸಾಧಿಸದರೂ ಆ 2 ಪಕ್ಷಗಳಿಗೆ ಸಂತೋಷವಾಗುವುದಿಲ್ಲ.
ಒಂದು ಪಕ್ಷ ಪಂಜಾಬ್‍ನ್ನು ಲೂಟಿ ಮಾಡಿದ್ರೆ ಇನ್ನೊಂದು ಪಕ್ಷ ದೆಹಲಿಯಲ್ಲಿ ಭ್ರಷ್ಟಾಚಾರ ಮಾಡುತ್ತಿದೆ ಎಂದು ಕಿಡಿಕಾರಿದರು. 2016 ರಲ್ಲಿ ಪಠಾಣ್ ಕೋಟ್ ದಾಳಿಯಲ್ಲಿ ಹುತಾತ್ಮರಾದ ಯೋಧರ ತ್ಯಾಗವನ್ನು ಕಾಂಗ್ರೆಸ್ ಅವಮಾನಿಸಿದೆ. ಕಾಂಗ್ರೆಸ್ ನಾಯಕರು ಸರ್ಕಾರವನ್ನು, ಪಂಜಾಬ್‍ನ ಜನತೆಯನ್ನು ಮತ್ತು ನಮ್ಮ ಸೈನ್ಯದ ಶೌರ್ಯದ ಬಗ್ಗೆ ಪ್ರಶ್ನೆ ಮಾಡಿದ್ದಾರೆ.
ಸೈನಿಕರ ತ್ಯಾಗವನ್ನು ಅವಮಾನಿಸಿದ್ದಾರೆ. 2019 ರಲ್ಲಿ ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ದಾಳಿಯ ವಾರ್ಷಿಕೋತ್ಸವದ ಸಂದರ್ಭದಲ್ಲಿಯೂ ಕಾಂಗ್ರೆಸ್ ಇದನ್ನೇ ಮಾಡಿದೆ. ಪುಲ್ವಾಮಾ ವಾರ್ಷಿಕೋತ್ಸವದಂದು ಸಹ ತಮ್ಮ ಬುದ್ಧಿಯನ್ನು ಮುಂದುವರಿಸಿದ್ದಾರೆ ಎಂದು ಟೀಕೆ ಮಾಡಿದರು. 2019 ಫೆಬ್ರವರಿ 14 ರಂದು, ಪಾಕಿಸ್ತಾನ ಮೂಲದ ಜೈಶ್ ಎ ಮೊಹಮ್ಮದ್ (ಜೆಇಎಂ) ಭಯೋತ್ಪಾದಕ ಗುಂಪು ಜಮ್ಮು ಹಾಗೂ ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್‍ಪಿಎಫ್‍ನ ಬೆಂಗಾವಲು ಪಡೆ ಮೇಲೆ ದಾಳಿ ಮಾಡಿ ನಾಲವತ್ತು ಪಡೆಯ ಸಿಬ್ಬಂದಿ ಹುತಾತ್ಮರಾಗಿದ್ರು.
ಪುಲ್ವಾಮಾ ದಾಳಿಗೆ ಪ್ರತಿಯಾಗಿ ಭಾರತೀಯ ಪಡೆಗಳು ಸರ್ಜಿಕಲ್ ಸ್ಟ್ರೈಕ್ ನಡೆಸಿದ್ದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸರ್ಜಿಕಲ್ ಸ್ಟ್ರೈಕ್‍ನ ಪುರಾವೆಯನ್ನು ನೀಡಲು ಕೇಳಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿಯಿಂದ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.