ಕೂಗು ನಿಮ್ಮದು ಧ್ವನಿ ನಮ್ಮದು

ಒಂದೇ ಸ್ಟೇಜ್ ಮೇಲೆ ನಿಖಿಲ್ ಕುಮಾರಸ್ವಾಮಿ, ಪ್ರಜ್ವಲ್ ರೇವಣ್ಣ ಪಕ್ಷ ಕಟ್ಟಲು ಪಣತೊಟ್ಟ ಸಹೋದರರು

ಬೆಂಗಳೂರು: ೪ ದಿನಗಳಿಂದ ಬಿಡದಿ ತೋಟದಲ್ಲಿ ನಡೆದ ಜನತಾ ಪರ್ವ ೧.೦ ಮತ್ತು ಮಿಷನ್ ೧೨೩ ಕಾರ್ಯಗಾರದಲ್ಲಿ ಇವತ್ತು ಜನತಾದಳದ ಯುವ ಪರಿವಾರವನ್ನು ಯುವ ಜನತಾದಳದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮತ್ತು ಸಂಸದ ಪ್ರಜ್ವಲ್ ರೇವಣ್ಣ ಜೋಡಿ ಸಮ್ಮೋಹನಗೊಳಿಸಿತು. ಈ
ಇಬ್ಬರು ಯುವ ನಾಯಕರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಾಗ ಸುಮಾರು ೫೦೦ಕ್ಕೂ ಹೆಚ್ಚು ಯುವ ಪ್ರತಿನಿಧಿಗಳು ಸಂತೋಷದಿಂದದ ಕೇಕೆ ಹಾಕಿದ್ರು. ತಮ್ಮಿಬ್ಬರ ನಡುವೆ ಭಿನ್ನಮತ ಇದೆ ಎಂದು ಬಿಂಬಿಸಿದ್ದವರಿಗೆ ಉತ್ತರ ಕೊಟ್ಟ ಇವರಿಬ್ಬರೂ, ಕುಟುಂಬದಲ್ಲಿಯೂ ನಾವು ಒಂದೇ. ಜೊತೆಗೆ ಪಕ್ಷದಲ್ಲಿ ಸಹ ಒಂದೇ. ನಮ್ಮನ್ನು ಬೇರೆ ಮಾಡಲು ಯಾರಿಗೂ ಸಾಧ್ಯವಿಲ್ಲ ಎಂದು ಘೋಷಿಸಿದ್ರು.

ಕಾರ್ಯಾಗಾರದಲ್ಲಿ ಪಸ್ಟ್ ಮಾತನಾಡಿದ ಪ್ರಜ್ವಲ್ ರೇವಣ್ಣ, ಅಣ್ಣ,ತಮ್ಮಂದಿರಾಗಿ ನಾವು ಯಾವತ್ತಿಗೂ ಒಂದೇ. ರಾಜ್ಯದಲ್ಲಿ ಪಕ್ಷ ಕಟ್ಟಲು ನಾವಿಬ್ಬರು ಒಂದಾಗಿ ಇದ್ದೇವೆ. ಕುಮಾರಣ್ಣ ಅವರನ್ನು ಮತ್ತೆ ಮುಖ್ಯಮಂತ್ರಿ ಮಾಡಲು ನಾವು ಇಬ್ಬರು ಯಾವಾಗಲೂ ಒಂದಾಗಿ ಇರ್ತೀವಿ, ಪಕ್ಷದ ಕೆಲಸ ಮಾಡುತ್ತೇವೆ. ಈ ಬಗ್ಗೆ ಯಾರಿಗೂ ಅನುಮಾನ ಬೇಡ ಎಂದು ತಿಳಿಸಿದ್ರು.

ನಾವು ಇಬ್ಬರು ಧರ್ಮಸ್ಥಳ ಮತ್ತು ಚಾಮುಂಡಿ ಬೆಟ್ಟಕ್ಕೆ ಹೋಗುತ್ತೇವೆ. ಮೈಸೂರಿಗೆ ಮೊದಲು ಹೋಗಿ ತಾಯಿ ಚಾಮುಂಡೇಶ್ವರಿ ಅಮ್ಮನ ಆಶೀರ್ವಾದ ಪಡೆದು ಕಾರ್ಯಕ್ರಮ ಮಾಡುತ್ತೇವೆ. ಅಲ್ಲಿಂದಲೇ ಯುವಕರನ್ನು ಒಟ್ಟುಗೂಡಿಸುತ್ತೇವೆ. ಇಂದು ನಮ್ಮಿಬ್ಬರನ್ನು ನೋಡಿ ಕುಮಾರಣ್ಣಗೆ ಬಹಳ ಖುಷಿಯಾಗಿದೆ‌. ಎಂದು ಪ್ರಜ್ವಲ್ ರೇವಣ್ಣ ಹೇಳಿದ್ರು. ತದನಂತರ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಪ್ರಜ್ವಲ್ ನನ್ನ ತಮ್ಮ. ನಾವ್ ಇಬ್ಬರು ಒಂದೆ ವೇದಿಕೆಯಲ್ಲಿ ಕಾಣಿಸೋಲ್ಲ ಅಂತಿದ್ರು. ಇಂದು ಒಂದೇ ವೇದಿಕೆಯ ಮೇಲೆ ಇಬ್ಬರು ಜೊತೆಯಲ್ಲಿದ್ದೇವೆ. ಯಾವತ್ತೂ ಇರುತ್ತೇವೆ. ಅನುಮಾನವೇ ಬೇಡ. ಇಂದು ನಾವು ಬೇರೆ ಬೇರೆ ಎಂದು ಬಿಂಬಿಸಿದ್ದವರಿಗೆ ಉತ್ತರ ಸಿಕ್ಕಿದೆ ಎಂದು ಭಾವಿಸಿದ್ದೇನೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ರು.

ನಮ್ಮದೇ ಎಂಬ ಸಂಕಲ್ಪ ಬಲದಿಂದ ಮುಂದೆ ಹೋಗೋಣ. ನಮ್ಮ ಪಕ್ಷದ ಸರ್ಕಾರ ಬರಲು ಎಲ್ಲ ಶ್ರಮವನ್ನು ಹಾಕೋಣ. ನಾನು ಹಾಗೂ ಪ್ರಜ್ವಲ್ ಈ ನಿಟ್ಟಿನಲ್ಲಿ ಮುಂಚೂಣಿಯಲ್ಲಿ ನಿಂತು ಕೆಲಸ ಮಾಡುತ್ತೇವೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.

error: Content is protected !!