ಪಾಟ್ನಾ: ಮಹಾತ್ಮ ಗಾಂಧಿ ಸಹ ಮದ್ಯ ಸೇವನೆಯನ್ನು ವಿರೋಧಿಸಿದ್ದರು. ಅವರ ತತ್ವಗಳಿಗೆ ವಿರುದ್ಧವಾಗಿ ನಡೆಯುವವರು ಮಹಾಪಾಪಿಗಳು. ಅಂತವರನ್ನು ಭಾರತೀಯರೆಂದು ಪರಿಗಣಿಸಲಾಗುವುದಿಲ್ಲವೆಂದು ಬಿಹಾರ ಸಿಎಂ ನಿತೀಶ್ ಕುಮಾರ್ ಹೇಳಿದರು. ಮಾದ್ಯಮದವರೊಂದಿಗೆ ಮಾತನಾಡಿದ ನಿತೀಶ್ ಕುಮಾರ್, ಮದ್ಯಪಾನ ಸೇವನೆ ಆರೋಗ್ಯಕ್ಕೆ ಹಾನಿಕರ ಎಂದು ತಿಳಿದಿದ್ದರೂ ಜನರು ಸೇವಿಸುತ್ತಾರೆ.
ಹಾಗಾಗಿ ಅದರ ಪರಿಣಾಮಗಳಿಗೆ ಅವರೇ ಹೊಣೆ ಹೊರತು ರಾಜ್ಯ ಸರ್ಕಾರ ಹೊಣೆಯಲ್ಲ. ಮದ್ಯಪಾನ ಸೇವಿಸಿ ಮೃತಪಡುವ ಜನರಿಗೆ ಪರಿಹಾರ ನೀಡಲು ರಾಜ್ಯ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡಲಾಗುವುದಿಲ್ಲ ಎಂದು ಹೇಳಿದ್ರು. ಬಿಹಾರ ನಿಷೇಧ ಹಾಗೂ ಅಬಕಾರಿ ತಿದ್ದುಪಡಿ ಮಸೂದೆ, 2022, ರಾಜ್ಯಪಾಲರ ಅನುಮೋದನೆಯನ್ನು ಪಡೆಯಿತು.
ಇದರ ಪ್ರಕಾರ ಅಪರಾಧಿಗಳು ದಂಡವನ್ನು ಠೇವಣಿ ಮಾಡಿದ ನಂತರ ಡ್ಯೂಟಿ ಮ್ಯಾಜಿಸ್ಟ್ರೇಟ್ನಿಂದ ಜಾಮೀನು ಪಡೆಯುತ್ತಾರೆ. ಒಂದು ವೇಳೆ ವ್ಯಕ್ತಿಯು ಅದನ್ನು ಪಾವತಿಸಲು ವಿಫಲವಾದರೆ, 1 ತಿಂಗಳ ಜೈಲು ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ. ಮದ್ಯ ನಿಷೇಧ ಕಾನೂನನ್ನು ಅಧಿಕಾರಿಗಳು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿಲ್ಲ ಹಾಗೂ ಜನರಿಂದ ಹಣ ಸುಲಿಗೆ ಮಾಡುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದ್ದರೆ, ಮದ್ಯ ನಿಷೇಧ ಕೇವಲ ಕಾಗದದಲ್ಲಿ ಮಾತ್ರ ಉಳಿದಿದೆ ಎಂದು ಪ್ರತಿಪಕ್ಷಗಳು ಟೀಕಿಸಿದೆ.