ಫೆಬ್ರವರಿ ಹತ್ತರಿಂದ ಆರಂಭವಾದ ಕರ್ನಾಟಕ ವಿಧಾನಸಭೆಯ ಬಜೆಟ್ ಅಧಿವೇಶನದ ಕೊನೆಯ ದಿನವಾದ ಇವತ್ತು ವಿಧಾನಸೌಧದ ಆವರಣದಲ್ಲಿ ಶಾಸಕರ ಗ್ರೂಪ್ ಫೋಟೋ ಶೂಟ್ ನಡೆಯಿತು.
ಹದಿನೈದನೇ ವಿಧಾನಸಭೆಯ ಕೊನೇಯ ಅಧಿವೇಶನ ಹಿನ್ನಲೆ ನಡೆದ ಫೋಟೋಶೂಟ್‌ನಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸಿಎಂ ಬಸವರಾಜ ಬೊಮ್ಮಾಯಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಶಾಸಕರು ಭಾಗಿಯಾಗಿದರು. ಆದರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಫೋಟೋಶೂಟ್ಗೆ ಗೈರಾದರು.