ಕೂಗು ನಿಮ್ಮದು ಧ್ವನಿ ನಮ್ಮದು

ನವ ವಿವಾಹಿತ ಮಹಿಳಾ ಕಾನ್ಸ್‌ಟೆಬಲ್ ಆತ್ಮಹತ್ಯೆ

ಬೆಂಗಳೂರು: ನವವಿವಾಹಿತ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಗೊಲ್ಲರಹಟ್ಟಿಯಲ್ಲಿ ನಡೆದಿದೆ. ಮನೆಯಲ್ಲಿ ನೇಣುಬಿಗಿದುಕೊಂಡು ನೇತ್ರಾ(27) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನೇತ್ರಾ, ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣೆಯ ಪಿಸಿ ಆಗಿ ಕಾರ್ಯನಿರ್ವಹಿಸುತ್ತಿದ್ದರು. ತಿಂಗಳ ಹಿಂದೆಯಷ್ಟೇ ಪೀಣ್ಯ ಸಂಚಾರಿ ಠಾಣೆಯ ಕಾನ್ಸ್‌ಟೇಬಲ್ ಮಂಜುನಾಥ್ ಜತೆಗೆ ವಿವಾಹವಾಗಿತ್ತು. ಮಂಜುನಾಥ್ ಮತ್ತು ನೇತ್ರಾ ಇಬ್ಬರು ಕೂಡ ತುಮಕೂರು ಜಿಲ್ಲೆಯವರು. ಇಬ್ಬರು ಪ್ರೀತಿಸಿ ಮನೆಯವರ ಒಪ್ಪಿಗೆ ಪಡೆದು ಮದುವೆಯಾಗಿದ್ದರು. ಸದ್ಯಕ್ಕೆ ಅಡುಗೆ ಮಾಡುವ ವಿಚಾರಕ್ಕೆ ಗಲಾಟೆ ನಡೆದು ನೇತ್ರಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುವುದಾಗಿ ಮೂಲಗಳು ಹೇಳಿವೆ. ಆದರೆ ಆತ್ಮಹತ್ಯೆಗೆ ಪೊಲೀಸರು ಇನ್ನೂ ನಿಖರ ಕಾರಣ ಸಿಕ್ಕಿಲ್ಲ ಎಂದು ತಿಳಿಸಿದ್ದಾರೆ. ಸದ್ಯ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

error: Content is protected !!