ಕೂಗು ನಿಮ್ಮದು ಧ್ವನಿ ನಮ್ಮದು

ಹೊನ್ನಾಳಿ ಶಾಸಕ ರೇಣುಕಾಚಾರ್ಯ ದಂಪತಿಯಿಂದ ಧನ್ವಂತರಿ ಹೋಮದ ಬಳಿಕ, ಕ್ಷೇತ್ರದ ಜನರಿಗೆ ಹೋಳಿಗೆ ಊಟ

ಹೊನ್ನಾಳಿ: ಶಾಸಕ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ಅವರು ಇಂದೂ ತಮ್ಮ ತನ ಸೇವೆಯನ್ನು ಮುಂದುವರಿಸಿದ್ದಾರೆ. ಕೊರೊನಾ ಮಹಾಮಾರಿಯಿಂದ ಕ್ಷೇತ್ರದ ಜನ ಸಂಕಷ್ಟಕ್ಕೆ ಸಿಲುಕಿರುವಾಗ ಶಾಸಕ ರೇಣುಕಾಚಾರ್ಯ ಅವರು ಒಂದಿಲ್ಲೊಂದು ರೂಪದಲ್ಲಿ ಅಹರ್ನಿಷಿಯಾಗಿ ಕ್ಷೇತ್ರದ ಜನತೆಯ ಸೇವೆಯಲ್ಲಿ ತೊಡಗಿದ್ದಾರೆ. ಇಂದು ಶುಕ್ರವಾರ, ಮನುಕುಲಕ್ಕೆ ಮಾರಕವಾಗಿ ಕಾಡುತ್ತಿರುವ ಕೊರೊನಾ ಸೋಂಕು ನಿವಾರಣೆಗಾಗಿ ಧನ್ವಂತರಿ ಹೋಮ ಹಾಗೂ ತಮ್ಮ ಜನತೆಯ ಆರೋಗ್ಯ ವೃದ್ಧಿಗಾಗಿ ಮೃತ್ಯುಂಜಯ ಹೋಮವನ್ನು ಅರಬಗಟ್ಟೆ ಕೋವಿಡ್ ಕೇರ್ ಸೆಂಟರ್ ನಲ್ಲಿ ನಡೆಸುತ್ತಿದ್ದಾರೆ.
ರೇಣುಕಾಚಾರ್ಯ ದಂಪತಿಯಿಂದ ಹೋಮದ ಬಳಿಕ ಹೋಳಿಗೆ ಊಟ:
ಮನುಕುಲಕ್ಕೆ ಮಾರಕವಾಗಿ ಕಾಡುತ್ತಿರುವ ಕೊರೊನಾ ಸೋಂಕು ನಿವಾರಣೆಗಾಗಿ ಧನ್ವಂತರಿ ಹೋಮ ಹಾಗು ನನ್ನ ಜನತೆಯ ಆರೋಗ್ಯ ವೃದ್ಧಿಗಾಗಿ ಮೃತ್ಯುಂಜಯ ಹೋಮವನ್ನು ಅರಬಗಟ್ಟೆ ಕೋವಿಡ್ ಕೇರ್ ಸೆಂಟರ್ ನಲ್ಲಿ ನೆಡೆಸಲಾಗುತ್ತಿದ್ದು ನಂತರ ಮದ್ಯಾಹ್ನ ಎಲ್ಲಾ ಕೋವಿಡ್ ಸೋಂಕಿತ ಬಂಧುಗಳಿಗೆ ಹಾಗು ಸಿಬ್ಬಂದಿಗಳಿಗೆ ಹೋಳಿಗೆ ಊಟದ ವ್ಯವಸ್ಥೆ ಮಾಡಿದ್ದೇನೆ ಎಂದು ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ.
ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಬಗಟ್ಟೆ ಕೋವಿಡ್ ಕೇರ್ ಸೆಂಟರ್ ನಲ್ಲಿ ರೇಣುಕಾಚಾರ್ಯ ದಂಪತಿ ಸ್ವತಃ ತಾವೇ ಕುಳಿತು ಹೋಮ ಮಾಡಿ ದೇವರಲ್ಲಿ ಪ್ರಾರ್ಥನೆ ಮಾಡಿದ್ದಾರೆ. ಕೊರೊನಾ ಸಂಪೂರ್ಣ ನಿರ್ಮೂಲನೆ ಮಾಡಲೆಂದು ಇಂದು ಬೆಳಗ್ಗೆಯಿಂದ ಪ್ರಾರ್ಥನೆಯಲ್ಲಿ ತೊಡಗಿದ್ದಾರೆ.

error: Content is protected !!