ಪ್ರಮೋದ್ ಮುತಾಲಿಕ್ ಚುನಾವಣೆಯ ಖರ್ಚಿಗೆ ಜನರಿಂದ ಹಣ ಕೇಳಿದ್ದಾರೆ. ಈ ಸಂಬಂಧ ಮಾತನಾಡಿರುವ ಸುನಿಲ್ ಕುಮಾರ್ ನೀವು ಹಣ ಮಾಡಲು ಕಾರ್ಕಳಕ್ಕೆ ಬಂದಿದ್ದ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಸಚಿವ ಸುನಿಲ್ ಕುಮಾರ್ ಗೆ ಪ್ರಮೋದ್ ಮುತಾಲಿಕ್ ತಿರಗೇಟು ನೀಡಿದ್ದಾರೆ. ಸುನಿಲ್ ಕುಮಾರ್ ಆತಂಕಕ್ಕೆ ಒಳಗಾಗಿದ್ದಾರೆ ಎಂಬುದು ಸ್ಪಷ್ಟವಾಗಿದೆ. ದುಡ್ಡಿಗೋಸ್ಕರ ನಾನು ಬೆಳಗಾವಿಯಿಂದ ಕಾರ್ಕಳಕ್ಕೆ ಬರಬೇಕಾಗಿಲ್ಲ.
ದುಡ್ಡೇ ಗಳಿಸಬೇಕಾಗಿದ್ದರೆ ನನಗೆ 45 ವರ್ಷ ಬೇಕಾಗಿರಲಿಲ್ಲ. ನಾನು ದುಡ್ಡಿಗೋಸ್ಕರ ಕಾರ್ಕಳಕ್ಕೆ ಬಂದಿಲ್ಲ ಸುನಿಲ್ ಕುಮಾರ್ ಅವರೇ. ಸುನಿಲ್ ಕುಮಾರ್ ಎಲ್ಲಿದ್ದರು? ಈಗ ಎಲ್ಲಿ ತಲುಪಿದ್ದಾರೆ. ಏನು ಆಗಿದ್ರಿ ಈಗೇನು ಆಗಿದ್ದೀರಿ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಿ. ನೀವು ಹತಾಶೆಯ ಮನೋಭಾವನೆಯನ್ನು ವ್ಯಕ್ತಪಡಿಸಿದ್ದೀರಿ ಎಂದು ಸಚಿವ ಸುನಿಲ್ ಕುಮಾರ್ ಗೆ ಪ್ರಮೋದ್ ಮುತಾಲಿಕ್ ತಿರಗೇಟು ನೀಡಿದ್ದಾರೆ.