ಕೂಗು ನಿಮ್ಮದು ಧ್ವನಿ ನಮ್ಮದು

ದಸರಾ ಹಬ್ಬಕ್ಕೆ ಪ್ರಮೋದಾದೇವಿಯವರಿಗೆ ಎಸ್.ಟಿ.ಸೋಮಶೇಖರ್ ಅಧಿಕೃತ ಆಹ್ವಾನ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ರಾಜಮಾತೆ ಪ್ರಮೋದಾದೇವಿಯನ್ನು ಸಹಕಾರ ಸಚಿವರು ಮತ್ತು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಇವತ್ತು ಅಧಿಕೃತವಾಗಿ ಆಹ್ವಾನಿಸಿದ್ದಾರೆ. ರಾಜಮಾತೆಗೆ ಫಲಪುಷ್ಪ ತಾಂಬೂಲ ನೀಡಿ ಗೌರವಿಸಿ ಆಹ್ವಾನ ಮಾಡಲಾಯಿತು. ಸಚಿವರ ಆಹ್ವಾನ ಸ್ವೀಕರಿಸಿದ ಪ್ರಮೋದಾದೇವಿ ದಸರಾ ಹಬ್ಬದ ಆಚರಣೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದರು.

ಬಳಿಕ ಸುದ್ದಿಗಾರರ ಜೊತೆಗೆ ಮಾತನಾಡಿದ ಸಚಿವರು, ಪ್ರತಿ ವರ್ಷದ ಪದ್ಧತಿಯಂತೆ ದಸರಾ ಹಬ್ಬಕ್ಕೆ ರಾಜಮಾತೆಯವರನ್ನು ಆಹ್ವಾನಿಸಲಾಯ್ತು. ದಸರಾಗೆ ಪೂರ್ಣ ಸಹಕಾರ ನೀಡುವಂತೆ ಕೋರಲಾಯ್ತು. ಅದಕ್ಕೆ ರಾಜಮಾತೆಯು ಸಕಾರಾತ್ಮಕವಾಗಿ ಸ್ಪಂದಿಸಿದ್ರು. ಅರಮನೆಯ ಕಾರ್ಯಕ್ರಮಗಳಿಗೂ ಯಾವುದೇ ಅಡಚಣೆಯಾಗದ ರೀತಿಯಲ್ಲಿ ಸಹಕಾರ ನೀಡುವಂತೆ ರಾಜಮಾತೆ ಹೇಳಿದರು.

ಸಂಪೂರ್ಣ ಸಹಕಾರ ಕೊಡುವುದಾಗಿ ತಿಳಿಸಲಾಗಿದೆ ಎಂದ್ರು. ಅಗಷ್ಟ್ ೭ ರಿಂದ ೧೫ ರವರೆಗೆ ದಸರಾ ಹಬ್ಬ ನಡೆಯಲಿದೆ. ದಸರಾ ಉದ್ಘಾಟನೆ ಕಾರ್ಯಕ್ರಮಕ್ಕೆ ಕೇವಲ ೪೦೦ ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ಚಾಮುಂಡಿ ತಾಯಿ ಬೆಟ್ಟದಲ್ಲಿ ಯಾವುದೇ ನಿರ್ಬಂಧ ಇಲ್ಲ. ದೇವರ ದರ್ಶನ ಮಾಡುವವರು ಮಾಡಬಹುದು ಎಂದು ಹೇಳಿದ್ರು. ಚಾಮುಂಡಿ ತಾಯಿ ಬೆಟ್ಟದಲ್ಲಿ ದಸರಾ ಹಬ್ಬ ಉದ್ಘಾಟನೆ, ಅರಮನೆ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು, ಜಂಬೂ ಸವಾರಿ ನಡೆಯಲಿದೆ. ಇದರ ಹೊರತು ಬೇರೆ ಯಾವುದೇ ಕಾರ್ಯಕ್ರಮಕ್ಕೆ ಅವಕಾಶವಿಲ್ಲ.

ಜಂಬೂ ಸವಾರಿ ವೀಕ್ಷಣೆಗೆ ಕೇವಲ ೫೦೦ ಮಂದಿಗೆ ಅವಕಾಶವಿದ್ದು, ಯಾವ ರೀತಿ ಅವಕಾಶ ಕಲ್ಪಿಸಬೇಕು ಎಂಬುದರ ಕುರಿತಾಗಿ ಚರ್ಚಿಸಿ ತೀರ್ಮಾನಿಸಲಾಗುವುದು ಎಂದ್ರು. ರಾಜಮಾತೆಗೆ ಆಹ್ವಾನ ನೀಡುವ ಸಂದರ್ಭದಲ್ಲಿ ಸಂಸದ ಪ್ರತಾಪ್ ಸಿಂಹ, ಶಾಸಕ ಎಲ್.ನಾಗೇಂದ್ರ, ಮೈಸೂರು ಮೇಯರ್ ಸುನಂದಾ ಪಾಲನೇತ್ರ, ಮೂಡಾ ಅಧ್ಯಕ್ಷ ರಾಜೀವ್, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಅಪರ ಜಿಲ್ಲಾಧಿಕಾರಿ

ಡಾ.ಬಿ.ಎಸ್.ಮಂಜುನಾಥಸ್ವಾಮಿ, ಸಚಿವರ ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ, ಪಾಲಿಕೆ ಆಯುಕ್ತರಾದ ಜಿ.ಲಕ್ಷ್ಮೀಕಾಂತ್ ರೆಡ್ಡಿ, ಮೈಸೂರು ನಗರ BJP ಅಧ್ಯಕ್ಷರಾದ ಶ್ರೀವತ್ಸ ಸೇರಿದಂತೆ ಹಲವು ಗಣ್ಯರು ಮತ್ತು ಅಧಿಕಾರಿವರ್ಗದವರು ಉಪಸ್ಥಿತರಿದ್ರು.

error: Content is protected !!