ಕೂಗು ನಿಮ್ಮದು ಧ್ವನಿ ನಮ್ಮದು

ಲೋಕಸಭೆಯಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಭಾಷಣ

ದೆಹಲಿ: ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಮೇಲೆ ಇಂದು ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ಮಾತನಾಡಲಿದ್ದಾರೆ.

ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಅಗ್ನಿವೀರ್‌, ಪರೀಕ್ಷಾ ಅಕ್ರಮ, ಹೊಸ ಅಪರಾಧ ಕಾನೂನು ಜಾರಿ ಸೇರಿದಂತೆ ಇತ್ತಿಚಿನ ಬೆಳವಣಿಗೆಯಲ್ಲಿ ಸರ್ಕಾರದ ನಡೆಯನ್ನು ಸಮರ್ಥಿಸುವ ಜೊತೆಗೆ ವಿರೋಧ ಪಕ್ಷಗಳ ನಾಯಕರ ಟೀಕೆಗೆ ಉತ್ತರ ನೀಡಲಿದ್ದಾರೆ.

ವಿಪಕ್ಷ ನಾಯಕ ರಾಹುಲ್‌ ಗಾಂಧಿ ಮೋದಿ, ಬಿಜೆಪಿ, ಆರ್‌ಎಸ್‌ಎಸ್ ಗುರಿಯಾಗಿಸಿ ಭಾಷಣ ಮಾಡಿದ್ದರು. ಅಷ್ಟೇ ಅಲ್ಲದೇ ಹಿಂದೂ ಹೇಳಿಕೊಳ್ಳುವವರಿಂದ ಹಿಂಸಾಚಾರ ಎಂದು ಹೇಳಿದ್ದು ಭಾರೀ ವಿವಾದಕ್ಕೆ ಕಾರಣವಾಗಿದೆ. ರಾಹುಲ್‌ ಭಾಷಣದ ಮಧ್ಯೆ ಪ್ರಧಾನಿ ಎದ್ದು ನಿಂತು ಈ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದರು. ಮೋದಿ ಅವರು ಈ ಎಲ್ಲಾ ವಿಚಾರಗಳನ್ನು ಪ್ರಸ್ತಾಪ ಮಾಡಿ ಇಂದು ತಿರುಗೇಟು ನೀಡುವ ಸಾಧ್ಯತೆಯಿದೆ.

ಸದನದಲ್ಲಿ ಮಾತನಾಡುವ ಮೊದಲು ಇಂದು ಬೆಳಗ್ಗೆ 9:30ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ಎನ್‌ಡಿಎ ಸಂಸದೀಯ ಪಕ್ಷದ ಸಭೆ ಕರೆದಿದ್ದು, ಸಭೆ ಉದ್ದೇಶಿಸಿ ಮಾತನಾಡುವ ಸಾಧ್ಯತೆಯಿದೆ. ಅಧಿಕಾರ ವಹಿಸಿಕೊಂಡ ನಂತರ ಸಂಸತ್ತಿನ ಮೊದಲ ಅಧಿವೇಶನದಲ್ಲಿ ಆಡಳಿತ ಪಕ್ಷದ ಸಂಸದರನ್ನು ಉದ್ದೇಶಿಸಿ ಮೊದಿ ಮೊದಲ ಬಾರಿಗೆ ಮಾತನಾಡುತ್ತಿರುವ ಹಿನ್ನೆಲೆ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳ ಎಲ್ಲಾ ಸಂಸತ್ ಸದಸ್ಯರಿಗೆ ಕಡ್ಡಾಯವಾಗಿ ಹಾಜಾರಾಗುವಂತೆ ಸೂಚನೆ ನೀಡಲಾಗಿದೆ.

error: Content is protected !!