ಕೂಗು ನಿಮ್ಮದು ಧ್ವನಿ ನಮ್ಮದು

ಬೆಳಗಾವಿಯಲ್ಲಿ ಒಂಟೆ ಸವಾರಿ ಮೂಲಕ ಪ್ರೋಟೆಸ್ಟ್ ರಮೇಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಅಭಿಮಾನಿಗಳ ಆಗ್ರಹ

ಬೆಳಗಾವಿ: ಶುಭ್ರವಾದ ಬಿಳಿಯ ಬಣ್ಣದ ಬಟ್ಟೆಗಳನ್ನು ಧರಿಸಿ ನಗರದ ಚನ್ನಮ್ಮ ವೃತ್ತಕ್ಕೆ ಆಗಮಿಸಿ ಒಂಟೆಗಳ ಮೇಲೆ ಸವಾರಿ ಮಾಡಿದ ಗೋಕಾಕ್ ಸಾಹುಕಾರ್ ರಮೇಶ ಜಾರಕಿಹೊಳಿ ಅಭಿಮಾನಿಗಳು, ಮತ್ತೆ ರಮೇಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡುವಂತೆ ವಿಭಿನ್ನ ಪ್ರತಿಭಟನೆ ನಡೆಸಿದರು. ರಮೇಶ್ ಜಾರಕಿಹೊಳಿ ಅವರಿಗೆ ಶೀಘ್ರದಲ್ಲೇ ಸಚಿವ ಸ್ಥಾನ ನೀಡಬೇಕು ಎಂದು ಒಂಟೆ ಏರಿ ಅಭಿಮಾನಿಗಳು ಘೋಷಣೆ ಕೂಗಿದರು, ಇನ್ನೊಂದಡೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಬೆಂಗಳೂರಿನಲ್ಲಿ ಅರುಣ ಸಿಂಗ್ ನೇತೃತ್ವದಲ್ಲಿ ಶಾಸಕರ ಸಭೆ ನಡೆದಿದೆ. ಆದರೆ ಬೆಳಗಾವಿಯಲ್ಲಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಅಭಿಮಾನಿಗಳು ತಮ್ಮ ನಾಯಕನಿಗೆ ಮತ್ತೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿ ವಿನೂತನ ಪ್ರತಿಭಟನೆ ನಡೆಸಿ ಎಲ್ಲರ ಗಮನ ಸೆಳೆದರು. ಅಶೋಕ ಅಸೋದೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ರಮೇಶ ಜಾರಕಿಹೊಳಿ ವಿರುದ್ಧ ರಾಜಕೀಯ ಷಡ್ಯಂತ್ರ ನಡೆದಿದೆ. ಪುನ: ರಮೇಶ ಜಾರಕಿಹೊಳಿ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂದು ಅಭಿಮಾನಿಗಳು ಆಗ್ರಹಿಸಿದರು. ಇತ್ತ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಬೆಂಗಳೂರಿನಲ್ಲಿ ಅರುಣ ಸಿಂಗ್ ನೇತೃತ್ವದಲ್ಲಿ ಶಾಸಕರ ಸಭೆ ನಡೆದಿರುವ ಹೊತ್ತಲ್ಲೇ ಬೆಳಗಾವಿಯಲ್ಲಿ ಈ ಪ್ರತಿಭಟನೆ ನಡೆದಿರುವುದು ಎಲ್ಲರ ಗಮನ ಸೆಳೆದಿದೆ.

error: Content is protected !!