ಬೆಂಗಳೂರು: ಪುನೀತ್ ರಾಜ್‌ಕುಮಾರ್ ಅವರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ರು.
ಈ ಸಂಬಂಧ ಟ್ವೀಟ್ ಮಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಯಾವ ಪ್ರಶಸ್ತಿ ಗೌರವಗಳಿಗಿಂತಲೂ ಪುನೀತ್ ರಾಜ್‌ಕುಮಾರ್ ಜನತೆಯಿಂದ ಗಳಿಸಿರುವ ಪ್ರೀತಿ,ಅಭಿಮಾನ ದೊಡ್ಡದು.
ಹೇಗಿದ್ರು ಪುನೀತ್ ರಾಜ್ ಕುಮಾರ್ ಬದುಕಿದ್ರೆ ತನ್ನ ನಟನೆ ಹಾಗೂ ಸಾಮಾಜಿಕ ಕಾಳಜಿಯಿಂದಾಗಿ ಖಂಡಿತ ಪದ್ಮಶ್ರೀ ಪ್ರಶಸ್ತಿಯನ್ನು ಪಡೆಯುತ್ತಿದ್ದರು ಹೀಗಾಗಿ ಪುನೀತ್ ಅವರಿಗೆ ಮರಣೋತ್ತರವಾಗಿ ನೀಡಬೇಕೆಂದು ಕೇಂದ್ರ ಸರ್ಕಾರಕ್ಕೆ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ನಟ ಪುನೀತ್ ರಾಜ್‌ಕುಮಾರ್ ಅವರಿಗೆ ರಾಜ್ಯ ಸರ್ಕಾರದಿಂದ ರಾಜ್ಯೋತ್ಸವ ಪ್ರಶಸ್ತಿ ನೀಡಬೇಕು ಎಂಬ ಒತ್ತಾಯವೂ ಕೇಳಿಬಂದಿದೆ.
ಅವರಿಗೆ ಸರ್ಕಾರದಿಂದ ಯಾವ ಪ್ರಶಸ್ತಿ ನೀಡಬೇಕು ಎಂಬ ಬಗ್ಗೆ ಉಪ ಚುನಾವಣೆ ಫಲಿತಾಂಶದ ನಂತರ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದ್ರು. ನಟ ಪುನೀತ್ ರಾಜ್‌ಕುಮಾರ್ ಹೃದಯ ಸ್ತಂಭನದಿಂದ ಶುಕ್ರವಾರ ನಿಧನರಾದ್ರು. ಅವರ ನಟನೆ, ಸಾಮಾಜಿಕ ಸೇವೆಯನ್ನು ಪರಿಗಣಿಸಿ ಮರಣೋತ್ತರ ಗೌರವ ಸಲ್ಲಿಸಬೇಕು ಎಂದು ಸಾರ್ವಜನಿಕರ ಒತ್ತಾಯವಾಗಿದೆ.