ಕೂಗು ನಿಮ್ಮದು ಧ್ವನಿ ನಮ್ಮದು

ಪುನೀತ್ ಸರ್ ನಿಮ್ಮನ್ನು ತುಂಬಾ ಮಿಸ್ ಮಾಡಿಕೊಳ್ತಿದ್ದೇವೆ: ರಾಧಿಕಾ ಪಂಡಿತ್

ಬೆಂಗಳೂರು: ಅಪ್ಪು ಅಗಲಿಕೆಯ ದುಃಖವನ್ನು ಸ್ಯಾಂಡಲ್‍ವುಡ್ ನಟಿ ರಾಧಿಕಾ ಪಂಡಿತ್ ಸೋಶಿಯಲ್ ಮೀಡಿಯಾದಲ್ಲಿ ತೋಡಿಕೊಂಡಿದ್ದಾರೆ. ಪುನೀತ್ ಸರ್ ನೀವು ಇನ್ನು ಮುಂದೆ ಇಲ್ಲ ಎಂಬುದನ್ನು ಇನ್ನೂ ನಮ್ಮ ಮನಸ್ಸು ಒಪ್ಪಿಕೊಳ್ಳುತ್ತಿಲ್ಲ. ಇದು ನಂಬಲಾಗದ ವಿಷಯವಾಗಿದೆ. ನೀವು ಇಲ್ಲದ ಇಂಡಸ್ಟ್ರಿ ಬರಡಾಗಿದೆ. ನಿಮ್ಮೊಂದಿಗೆ ಕೆಲಸ ಮಾಡುವ ಅವಕಾಶ ನೀಡಿದ್ದಕ್ಕಾಗಿ ನಿಮಗೆ ಧನ್ಯವಾದಗಳು ಸರ್ ನಿಮ್ಮನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇವೆ ಎಂದು ಬರೆದುಕೊಂಡು ಅಪ್ಪು ಜೊತೆಗೆ ಇರುವ ಕೆಲವು ಫೋಟೋಗಳನ್ನು ಶೇರ್ ಮಾಡಿ ರಾಧಿಕಾ ಅವರು ಬೇಸರ ವ್ಯಕ್ತಪಡಿಸಿದ್ರು.

ಅಕ್ಟೋಬರ್ ೨೯ರಂದು ಶುಕ್ರವಾರ ಮುಂಜಾನೆ ಮನೆಯಲ್ಲಿ ವರ್ಕೌಟ್ ಮಾಡಿದ ಸಂದರ್ಭದಲ್ಲಿ ಅಪ್ಪುಗೆ ಆಯಾಸ ಕಾಣಿಸಿಕೊಂಡಿತು. ಹಾಗೆಯೇ ಸ್ಟೀಮ್ ಬಾತ್ ಮಾಡಿಕೊಂಡು ಪತ್ನಿ ಜೊತೆ ಸ್ಥಳೀಯ ರಮಣಶ್ರೀ ಆಸ್ಪತ್ರೆಗೆ ತೆರಳಿದ್ದಾರೆ. ಅಲ್ಲಿ ಇಸಿಜಿ ಮಾಡಿಸಿಕೊಂಡು ಇನ್ನೇನು ಹೊರಡುವಷ್ಟರಲ್ಲಿ ಅಲ್ಲಿಯೇ ಕುಸಿದುಬಿದ್ರು. ಕೂಡಲೇ ಅವರನ್ನು ಕಾರಿನಲ್ಲಿ ನಗರದ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು, ಅದು ಫಲಕಾರಿಯಾಗದೆ ಆಸ್ಪತ್ರೆಯಲ್ಲಿಯೇ ಅಪ್ಪು ಕೊನೆಯುಸಿರೆಳೆದಿದ್ದರು.

ಕಂಠೀರವ ಸ್ಟುಡಿಯೋದಲ್ಲಿ ಅಂತಿಮ ವಿಧಿ ವಿಧಾನಗಳ ಮೂಲಕವಾಗಿ ಪುನೀತ್ ಅಂತ್ಯಕ್ರಿಯೆ ಮಾಡಲಾಯಿತ್ತು. ಪುನೀತ್ ಅವರ ಸಮಾಧಿ ನೋಡಲು ಸಾಗರೋಪಾದಿಯಲ್ಲಿ ಅಭಿಮಾನಿಗಳ ಸಾಗರವೇ ಹರಿದು ಬರುತ್ತಿದೆ. ನಿನ್ನೆ ಅವರ ಸ್ಮರಣಾರ್ಥಕವಾಗಿ ರಾಜ್ ಕುಟುಂಬಸ್ಥರು ಅಭಿಮಾನಿಗಳಿಗೆ ಅನ್ನಸಂತರ್ಪಣೆ ಮಾಡಿದ್ರು. ಪುನೀತ್ ಅಗಲಿಕೆಯ ನೋವನ್ನು ಅಭಿಮಾನಿಗಳು, ಸ್ಯಾಂಡಲ್‍ವುಡ್, ಕಲಾವಿದರು, ಕುಟುಂಬದವರಿಗೆ ಮರೆಯಲು ಸಾಧ್ಯವಾಗುತ್ತಿಲ್ಲ. ಇದೀಗ ರಾಧಿಕಾ ಪಂಡಿತ್ ಅವರು ತಮ್ಮ ನೋವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದು, ಅಭಿಮಾನಿಗಳು ತಾವು ಮಿಸ್ ಮಾಡಿಕೊಳ್ಳುತ್ತಿರುವುದಾಗಿ ಕಾಮೆಂಟ್ ಮಾಡುತ್ತಿದ್ದಾರೆ.

error: Content is protected !!