ಬೆಂಗಳೂರು: ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ-ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಹಾಗೂ ಇತರ ಪಕ್ಷಗಳಿಂದ ವಿಧಾನಸಭೆಗೆ ಅಯ್ಕೆಯಾಗಿರುವ ಸದಸ್ಯರೆಲ್ಲರೂ ಇಂದು ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದರು.
ಏತನ್ಮಧ್ಯೆ, ಕಾಂಗ್ರೆಸ್ ಪಕ್ಷದ ಹಿರಿಯ ರಾಜಕಾರಣಿ ಮತ್ತು ಹಳಿಯಾಳ ಕ್ಷೇತ್ರದಿಂದ ಅಯ್ಕೆಯಾಗಿರುವ ಆರ್ ವಿ ದೇಶಪಾಂಡೆ ಅವರು 16ನೇ ವಿಧಾನಸಭೆಯ ಹಂಗಾಮಿ ಸಭಾಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣ ವಚನ ಬೋಧಿಸುವಾಗ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಹಾಜರಿದ್ದರು