ನಟಿ ರಾಗಿಣಿ ದ್ವಿವೇದಿ ಅವರಿಗೆ ಇಂದು ಬರ್ತ್ಡೇ ಸಂಭ್ರಮ. ಈ ವಿಶೇಷ ದಿನದಂದು ಅವರು ಅಭಿಮಾನಿಗಳನ್ನು ಭೇಟಿ ಮಾಡಿದ್ದಾರೆ. ನೆಚ್ಚಿನ ಸೆಲೆಬ್ರಿಟಿಯನ್ನು ಭೇಟಿ ಮಾಡಬೇಕು ಎಂದು ಫ್ಯಾನ್ಸ್ ಬಯಸುತ್ತಾರೆ. ಅದರಲ್ಲೂ ಬರ್ತ್ಡೇ ದಿನ ಅಭಿಮಾನಿಗಳು ಕೇಕ್ ತಂದು ಕತ್ತರಿಸುತ್ತಾರೆ. ಇದಕ್ಕೆ ಅವಕಾಶ ಕೊಟ್ಟಿದ್ದಾರೆ ರಾಗಿಣಿ. ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕಲಾವಿದರ ಸಂಘದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ ಐದು ಗಂಟೆವರೆಗೆ ಅವರು ಫ್ಯಾನ್ಸ್ನ ಭೇಟಿ ಮಾಡುತ್ತಿದ್ದಾರೆ.
ರಾಗಿಣಿ ದ್ವಿವೇದಿ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಸಿನಿಮಾಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ರಾಗಿಣಿ ಅವರಿಗೆ ಬಾಲಿವುಡ್ನಲ್ಲೂ ಬೇಡಿಕೆ ಇದೆ. ರಾಗಿಣಿ ಅವರು ಇತ್ತೀಚೆಗೆ ಬಾಲಿವುಡ್ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಚಿತ್ರದ ಕೆಲಸಗಳು ಕೂಡ ಭರದಿಂದ ಸಾಗಿವೆ. ಇದಲ್ಲದೆ ಕನ್ನಡ ಸಿನಿಮಾಗಳಲ್ಲೂ ಅವರು ಬ್ಯುಸಿ ಇದ್ದಾರೆ.