ಕೂಗು ನಿಮ್ಮದು ಧ್ವನಿ ನಮ್ಮದು

ಇವತ್ತು ಬೀದರ್ ಜಿಲ್ಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಪ್ರವಾಸ

ಬೀದರ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಬೀದರ್ ಜಿಲ್ಲೆ ಪ್ರವಾಸ ಕೈಗೊಳ್ಳಲಿದ್ದಾರೆ. ಭಾಲ್ಕಿ, ಹುಮ್ನಾಬಾದ್ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಬೆಂಗಳೂರಿನಿಂದ ಬೀದರ್ಗೆ ರಾಹುಲ್ ಆಗಮಿಸಲಿದ್ದು ಬೀದರ್ ಏರ್ಬೇಸ್ನಿಂದ ಭಾಲ್ಕಿ ಪಟ್ಟಣಕ್ಕೆ ತೆರಳಲಿ ಭಾಲ್ಕಿ ಪಟ್ಟಣದಲ್ಲಿ ನಡೆಯುವ ಜನಕ್ರಾಂತಿ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.

ಬಳಿಕ ಹುಮ್ನಾಬಾದ್ನಲ್ಲಿ ನಡೆಯುವ ಸಮಾವೇಶದಲ್ಲೂ ಭಾಗಿಯಾಗಲಿದ್ದಾರೆ. ಹುಮ್ನಾಬಾದ್ನಿಂದ ಹೆಲಿಕಾಪ್ಟರ್ ‌ಮೂಲಕ ಬೀದರ್ಗೆ ಪ್ರಯಾಣಿಸಿ ಬೀದರ್ ಏರ್ಬೇಸ್ನಿಂದ ದೆಹಲಿಗೆ ತೆರಳಲಿದ್ದಾರೆ

error: Content is protected !!