ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರಿ ಗಾಳಿ ಮಳೆ ಹಿನ್ನೆಲೆ ರಾಜ್ಯ ಹೆದ್ದಾರಿಯಲ್ಲಿ ಕಾರಿನ ಮೇಲೆ ಬೃಹತ್ ಗಾತ್ರದ ಮರ ಬಿದಿರುವಂತಹ ಘಟನೆ ಜಿಲ್ಲೆಯ ಶೃಂಗೇರಿ ತಾಲೂಕಿನ ಕುಂಚೆಬೈಲು ಗ್ರಾಮದ ಬಳಿ ನಡೆದಿದೆ.
ಚಿಕ್ಕಮಗಳೂರು ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ ಸಂಚಾರ ಬಂದ್ ಆಗಿದೆ. ಓಮ್ನಿ ಕಾರು ಸಂಪೂರ್ಣ ಜಖಂ ಆಗಿದ್ದು, ಅದೃಷ್ಟವಶಾತ್ ಬಾರಿ ಅನಾಹುತ ತಪ್ಪಿದೆ.