ಹಾಸನ: ಬಿರುಗಾಳಿ ಸಹಿತ ಮಳೆಯಿಂದಾಗಿ ಹಾಸನ ಜಿಲ್ಲೆಯಲ್ಲಿ ಅಪಾರ ಹಾನಿಯಾಗಿದೆ. ನಿನ್ನೆ ಸುರಿದ ಭಾರಿ ಮಳೆ, ಬಿರುಗಾಳಿಗೆ ಹಲವೆಡೆ ಅವಾಂತರ ಸೃಷ್ಟಿಯಾಗಿದೆ.
ಬೇಲೂರು ತಾಲೂಕಿನಲ್ಲಿ ನೆಲಕ್ಕುರುಳಿದ ವಿದ್ಯುತ್ ಕಂಬಗಳು, ಮರಗಳು ಧರೆಗೆ ಉರುಳಿದ್ದರೇ, ಬಿರುಗಾಳಿಗೆ ಮನೆಯ ಮೇಲ್ಛಾವಣಿಗೆ ಹಾಕಿದ್ದ ಶೀಟ್ಗಳು ಹಾರಿಹೋಗಿವೆ. ಅಲ್ಲದೇ ನೂರಾರು ಎಕರೆಯಲ್ಲಿ ಬೆಳೆದಿದ್ದ ಬಾಳೆ ತೋಟ ಸಂಪೂರ್ಣ ನಾಶವಾಗಿದೆ