ಗದಗ ಜಿಲ್ಲೆ ರೋಣ ತಾಲೂಕಿನ ಅರಹುಣಸಿ ಗ್ರಾಮದಲ್ಲಿ ಭಾರಿ ಗಾಳಿ ಮಳೆಗೆ ಶಾಲಾ ಮೇಲ್ಛಾವಣಿ ಕಿತ್ತು ಹೋಗಿದೆ. ಭಾರಿ ಗಾಳಿ ಸಹಿತ ಮಳೆಯಿಂದ ಪ್ರಾಥಮಿಕ ಶಾಲೆಯ ಕೊಠಡಿಗಳ ಮೇಲ್ವಿಚಾವಣಿ ಹಾನಿಯಾಗಿದೆ.
ಕಟ್ಟಡ ದುರಸ್ತಿ ಮಾಡಿಸಿ ವರ್ಷಗಳು ಕಳೆದಿಲ್ಲ. ಕಳಪೆ ಕಾಮಗಾರಿಯಿಂದ ಮಳೆಗಾಳಿಗೆ ತಗಡುಗಳು ಹಾರಿಹೋಗಿವೆ ಅಂತ ಗ್ರಾಮಸ್ಥರ ಆರೋಪಿಸಿದ್ದಾರೆ. ನಾಲ್ಕು ಕೊಠಡಿಗಳ ಪೈಕಿ ಮೂರು ಕೊಠಡಿಗಳ ಮೇಲ್ಚಾವಣಿ ಹಾನಿಯಾಗಿದೆ