ಬೆಂಗಳೂರು: ಬಿಪರ್ಜಾಯ್ ಚಂಡಮಾರುತವು ಅರಬ್ಬಿ ಸಮುದ್ರದಲ್ಲಿ ತೀವ್ರ ಸ್ವರೂಪ ಪಡೆದಿದೆ, ಇದರ ಪರಿಣಾಮ ಕರ್ನಾಟಕ ಸೇರಿದಂತೆ ಇತರೆ ರಾಜ್ಯಗಳಲ್ಲಾಗಲಿದೆ. ಮುಂದಿನ 3-4 ದಿನಗಳಲ್ಲಿ ಕೆಲವು ರಾಜ್ಯಗಳಲ್ಲಿ ಭಾರಿ ಮಳೆ ಸುರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರ್ನಾಟಕದ ಕರಾವಳಿ, ಗೋವಾ, ಕೇರಳ, ಲಕ್ಷದ್ವೀಪ, ತಮಿಳುನಾಡು, ಆಂಧ್ರಪ್ರದೇಶ, ರಾಜಸ್ಥಾನ, ಅಸ್ಸಾಂ, ಮಿಜೋರಾಂ, ಮಣಿಪುರ, ಅರಿಣಾಚಲಪ್ರದೇಶ, ಮೇಘಾಲಯದಲ್ಲೂ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ತುಮಕೂರಿನಲ್ಲಿ ಭಾರಿ ಮಳೆಯಾಗಲಿದೆ, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರ್ನಾಟಕದ ಕರಾವಳಿ ಬಿಸಿಲ ಧಗೆಗೆ ನಲುಗಿ ಹೋಗಿದ್ದು, ನೀರಿಗಾಗಿ ಜನರು ತತ್ತರಿಸುತ್ತಿದ್ದಾರೆ. ಎಲ್ಲೆಡೆ ನೀರಿಗಾಗಿ ಹಾಹಾಕಾರ ಕೇಳಿ ಬರುತ್ತಿದೆ. ಈ ನಡುವೆ ನಿನ್ನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಾಗಿದೆ. ಅಲ್ಲದೇ ರಾಜ್ಯದ ಹಲವು ಜಿಲ್ಲೆಗಳಲ್ಲೂ ಮಳೆಯಾಗಿದ್ದು, ಬಿರು ಬಿಸಿಲಿನಿಂದ ಬೇಯುತ್ತಿದ್ದ ಜನರಿಗೆ ಮಳೆರಾಯ ತಂಪೆರೆದ್ದಿದ್ದಾನೆ. ಇನ್ನು ರಾಜ್ಯ ರಾಜಕೀಯದಲ್ಲಂತೂ ಗೋಹತ್ಯ ನಿಷೇಧ, ಸರ್ಕಾರದ 5 ಗ್ಯಾರೆಂಟಿ ಯೋಜನಗಳ ಜಾರಿ ಮತ್ತು ಪಠ್ಯ ಪುಸ್ತಕ್ತ ಮರು ಪರೀಷ್ಕರಣೆ ವಿಚಾರ ಸಾಕಷ್ಟು ಚರ್ಚೆಯಾಗುತ್ತಿವೆ. ರಾಜ್ಯದಲ್ಲಿ ಭೀಕರ ಅಪಘಾತ, ಅಪರಾಧ ಪ್ರಕರಣಗಳು ವರದಿಯಾಗುತ್ತಿವೆ