ರಾಜ್ಯದಲ್ಲಿ ಇಂದಿನಿಂದ 4 ದಿನ ಭಾರಿ ಮಳೆ ನಿರೀಕ್ಷೆ
ಕರಾವಳಿ ಭಾಗ ಸೇರಿ ರಾಜ್ಯದ ನಾನಾ ಭಾಗದಲ್ಲಿ ವರುಣಾರ್ಭಟ ಶುರುವಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು ಉಡುಪಿ, ಹಾಸನ, ಶಿವಮೊಗ್ಗ ಹಾಗೂ ಕೊಡಗು ಸೇರಿದಂತೆ ಬಹುತೇಕ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಕೆಲವು ಭಾಗದಲ್ಲಿ ಭಾರಿ ಮಳೆಯಾಗಲಿದೆ.
ಈ ಬಗ್ಗೆ ಈಗಾಗಲೇ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಅಲರ್ಟ್ ಘೋಷಿಸಿದೆ.