ಕೂಗು ನಿಮ್ಮದು ಧ್ವನಿ ನಮ್ಮದು

ರಾಜ್ಯದಲ್ಲಿ ಮುಂದಿನ 3 ದಿನ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ 3 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯು ಸೂಚನೆ ನೀಡಿದೆ. ಅರಬ್ಬೀ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಾಗೂ ವಾಯುಭಾರ ಕುಸಿತ ಕಾಣಿಸಿಕೊಂಡಿರುವ ಹಿನ್ನೆಲೆ ಮುಂದಿನ ೩ ದಿನ ಮಳೆಯ ಆರ್ಭಟ ಇರಲಿದೆ. ಜೊತೆಗೆ ಬೆಂಗಳೂರಿನಲ್ಲಿಯೂ ವ್ಯಾಪಾಕವಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಎಚ್ಚರಿಕೆ ಕೊಟ್ಟಿದೆ.

ಕಳೆದ ೧ ವಾರದಿಂದ ಬಿಡುವು ನೀಡಿದ್ದ ಮಳೆರಾಯ ಇದೀಗ ಮತ್ತೆ ಅಬ್ಬರಿಸಲು ಶುರು ಮಾಡಿದ್ದಾನೆ. ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ಇಡೀ ಬೆಂಗಳೂರು ಅಕ್ಷರಶಃ ತತ್ತರಿಸಿ ಹೋಗಿದೆ. ಅಲ್ಲದೇ ನಗರದ ಕೆಲವಾರು ಪ್ರಮುಖ ರಸ್ತೆಗಳು ಜಲಾವೃತಗೊಂಡಿದ್ದು, ಅನೇಕ ವಾಹನಗಳು ನೀರಿನಲ್ಲಿ ಮುಳುಗಿ ಹೋಗಿವೆ. ನಗರದ ಕೆಲವಾರು ತಗ್ಗು ಪ್ರದೇಶದಲ್ಲಿರುವ ಮನೆಗಳಿಗೆ ಮಳೆಯ ನೀರು ನುಗ್ಗಿದ್ದು, ರಾತ್ರಿ ಎಲ್ಲ ಜನ ನೀರನ್ನು ಮನೆಯಿಂದ ಹೊರಹಾಕಲು ಜಾಗರಣೆ ಮಾಡಿದ್ದಾರೆ. ಮಾಗಡಿ ರಸ್ತೆಯ ಟೋಲ್‍ಗೇಟ್, ಕಸ್ತೂರಬಾ ನಗರ, ಅಶೋಕ ಪಿಲ್ಲರ್, ಜೆ.ಸಿ ರಸ್ತೆ, ಊರ್ವಶಿ ಥಿಯೇಟರ್ ರಸ್ತೆ, ಕೆ.ಆರ್.ಮಾರ್ಕೆಟ್, ಕಾರ್ಪೊರೇಷನ್, ಶಾಂತಿನಗರ, ಲಾಲ್‍ಬಾಗ್, ಸುಧಾಮನಗರ, ಟೌನ್‍ಹಾಲ್, ಮೆಜೆಸ್ಟಿಕ್, ರಾಜಾಜಿನಗರ, ಶಾಂತಿನಗರದಲ್ಲಿ ಭಾರೀ ಮಳೆಯಾಗಿದೆ.

error: Content is protected !!